ಮಂಜೇಶ್ವರ: ಕನ್ನಡ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು ಮತ್ತು ಕಾಸರಗೋಡು ಜಿಲ್ಲಾ ಕನ್ನಡ ಲೇಖಕರ ಸಂಘದ ಸಹಯೋಗದಲ್ಲಿ, ಮಂಜೇಶ್ವರ ಗೋವಿಂದ ಪೈ ಸ್ಮಾರಕ ಸರಕಾರಿ ಕಾಲೇಜಿನ ಕನ್ನಡ ವಿಭಾಗ ಮತ್ತು ಗಿಳಿವಿಂಡು ಕನ್ನಡ ಸಾಹಿತ್ಯಕ ಮತ್ತು ಸಾಂಸ್ಕøತಿಕ ವೇದಿಕೆಯ ಸಹಕಾರದೊಂದಿಗೆ ಮಂಜೇಶ್ವರ ಗೋವಿಂದ ಪೈ ಸ್ಮಾರಕ ಸರ್ಕಾರಿ ಕಾಲೇಜಿನಲ್ಲಿ ನಡೆದ 'ಕಾಸರಗೋಡಿನಲ್ಲಿ ಕನ್ನಡ ಅಸ್ಮಿತೆ ಯುವಶಕ್ತಿ ಮತ್ತು ಭವಿಷ್ಯ 'ಎಂಬ ವಿಷಯದ ಕುರಿತಾದ ಒಂದು ದಿನದ ವಿಚಾರ ಸಂಕಿರಣ ಸಂಪನ್ನಗೊಂಡಿತು.
ಸಮಾರೋಪ ಸಮಾರಂಭದಲ್ಲಿ ಖ್ಯಾತ ವಿಮರ್ಶಕ, ಅಂಕಣಕಾರ ಡಾ. ಎಸ್ .ಆರ್ ವಿಜಯಶಂಕರ್ ಬೆಂಗಳೂರು ಸಮಾರೋಪ ಭಾಷಣ ಮಾಡಿದರು. ಕಾಸರಗೋಡು ಜಿಲ್ಲಾ ಕನ್ನಡ ಲೇಖಕರ ಸಂಘದ ಕಾರ್ಯಾಧ್ಯಕ್ಷ ಪೆÇ್ರ. ಪಿ .ಎನ್ ಮೂಡಿತ್ತಾಯ ಅಧ್ಯಕ್ಷತೆ ವಹಿಸಿದರು. ಕರ್ನಾಟಕ ಸಮಿತಿ ಅಧ್ಯಕ್ಷ ಮುರಳೀಧರ ಬಳ್ಳಕ್ಕುರಾಯ, ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕದ ಅಧ್ಯಕ್ಷ ಡಾ.ಜಯಪ್ರಕಾಶ ನಾರಾಯಣ ತೊಟ್ಟೆತ್ತೋಡಿ, ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ಅಧ್ಯಕ್ಷ ಸುಕೇಶ.ಎ ಉಪಸ್ಥಿತರಿದ್ದರು. ಕಾಲೇಝಿನ ಸಹಾಯಕ ಪ್ರಾಧ್ಯಾಪಕಿ ಜಯಂತಿ.ಕೆ ಸ್ವಾಗತಿಸಿದರು. ಆಯಿಶಾ ಪೆರ್ಲ ವಂದಿಸಿದರು.
ಈ ಸಂದರ್ಭ ಖ್ಯಾತ ಸಾಹಿತಿ ಡಾ ರಮಾನಂದ ಬನಾರಿ ಅವರ ಸಾರಥ್ಯದಲ್ಲಿ ಪ್ರಕಟಗೊಳ್ಳುತ್ತಿರುವ 'ಕನ್ನಡಿಯಲ್ಲಿ ಕನ್ನಡಿಗ 'ಕೃತಿ ಸರಣಿಯ ಆರನೇ ಸಂಚಿಕೆಯನ್ನು ಸಾಹಿತಿ, ನಿವೃತ್ತ ಪ್ರಾಧ್ಯಾಪಿಕೆ ಡಾ. ಪ್ರಮೀಳಾ ಮಾಧವ್ ಬಿಡುಗಡೆ ಗೊಳಿಸಿದರು. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ, ಡಾ. ರಮಾನಂದ ಬನಾರಿ ಮೊದಲಾದವರು ಉಪಸ್ಥಿತರಿದ್ದರು.

.jpg)

