HEALTH TIPS

ರಕ್ಷಣಾ ಸಹಕಾರ: ಭಾರತ- ಫ್ರಾನ್ಸ್‌ ದ್ವಿಪಕ್ಷೀಯ ಸಭೆ ನಾಳೆ

ನವದೆಹಲಿ: ಭಾರತ ಮತ್ತು ಫ್ರಾನ್ಸ್‌ ನಡುವೆ ರಕ್ಷಣಾ ವಿಷಯಗಳಿಗೆ ಸಂಬಂಧಿಸಿದ ಆರನೇ ದ್ವಿಪಕ್ಷೀಯ ಸಭೆ ನಾಳೆ (ಫೆ. 17) ಬೆಂಗಳೂರಿನಲ್ಲಿ ನಡೆಯಲಿದೆ. ಈ ವೇಳೆ ಉಭಯ ರಾಷ್ಟ್ರಗಳು ಹತ್ತು ವರ್ಷಗಳ ರಕ್ಷಣಾ ಸಹಕಾರ ಒಪ್ಪಂದವನ್ನು ನವೀಕರಿಸಲಿವೆ. 

ರಕ್ಷಣಾ ಸಚಿವ ರಾಜನಾಥ ಸಿಂಗ್ ಮತ್ತು ಫ್ರಾನ್ಸ್‌ನ ರಕ್ಷಣಾ ಸಚಿವೆ ಕ್ಯಾಥರಿನ್‌ ವೋಥಾ ಅವರು ಎರಡೂ ದೇಶಗಳ ನಡುವಿನ ರಕ್ಷಣಾ ಸಹಕಾರದ ಕುರಿತು ಮಾತುಕತೆ ನಡೆಸಲಿದ್ದಾರೆ.

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್‌ ಸಹಭಾಗಿತ್ವದಲ್ಲಿ ಭಾರತದಲ್ಲಿ ಹಮರ್‌ ಕ್ಷಿಪಣಿಗಳನ್ನು ಅಭಿವೃದ್ದಿಪಡಿಸುವುದಕ್ಕೆ ಸಂಬಂಧಿಸಿದ ಒಪ್ಪಂದಕ್ಕೆ ಇಬ್ಬರೂ ಸಹಿ ಹಾಕಲಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಕೋಲಾರ ತಾಲ್ಲೂಕಿನ ವೇಮಗಲ್‌ ಕೈಗಾರಿಕಾ ಪ್ರದೇಶದಲ್ಲಿ ಟಾಟಾ ಅಡ್ವಾನ್ಸ್‌ಡ್ ಸಿಸ್ಟಮ್ಸ್ ಲಿಮಿಟೆಡ್‌ (ಟಿಎಎಸ್‌ಎಲ್‌) ಮತ್ತು ಏರ್‌ಬಸ್‌ ಜಂಟಿಯಾಗಿ ಆರಂಭಿಸಿರುವ ಎಚ್‌ 125 ಹೆಲಿಕಾಪ್ಟರ್‌ ಅಂತಿಮ ಜೋಡಣಾ ಘಟಕದ ಉದ್ಘಾಟನಾ ಸಮಾರಂಭದಲ್ಲಿ ಇಬ್ಬರೂ ಪಾಲ್ಗೊಳ್ಳಲಿದ್ದಾರೆ. ಈ ಘಟಕವನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ ಫ್ರಾನ್ಸ್‌ ಅಧ್ಯಕ್ಷ ಇಮ್ಯಾನುವೆಲ್ ಮ್ಯಾಕ್ರನ್ ಅವರು ವರ್ಚುವಲ್‌ ಆಗಿ ಉದ್ಘಾಟಿಸುವರು.

ಇದು ಭಾರತದ ಮೊದಲ ಖಾಸಗಿ ಹೆಲಿಕಾಪ್ಟರ್ ತಯಾರಿಕಾ ಘಟಕವಾಗಿದ್ದು, 2027ರಲ್ಲಿ ಮೊದಲ ಹೆಲಿಕಾಪ್ಟರ್‌ ಅನ್ನು ಹೊರತರುವ ನಿರೀಕ್ಷೆಯಿದೆ.

ಉಭಯ ದೇಶಗಳ ನಡುವಿನ ಐದನೇ ದ್ವಿಪಕ್ಷೀಯ ಸಭೆ ನಡೆದ ಎರಡೂವರೆ ವರ್ಷಗಳ ನಂತರ ಈ ಸಭೆ ನಡೆಯುತ್ತಿದೆ. ಕೈಗಾರಿಕಾ ವಲಯದ ಸಹಕಾರವನ್ನು ವೃದ್ಧಿಸುವ ಬಗ್ಗೆಯೂ ಚರ್ಚೆ ನಡೆಯಲಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries