ಕಾಸರಗೋಡು: ವಿಶ್ವ ಅರ್ಬುದ ರೋಗ ದಿನಾಚರಣೆಯ ಜಿಲ್ಲಾ ಮಟ್ಟದ ಉದ್ಘಾಟನೆ ಕೋಡೋಂಬೇಲೂರು ಗ್ರಾಮ ಪಂಚಾಯಿತಿಯ ಎಣ್ಣಪ್ಪಾರ ಕುಟುಂಬ ಆರೋಗ್ಯ ಕೇಂದ್ರದ ಸಮ್ಮೇಳನ ಸಭಾಂಗಣದಲ್ಲಿ ಜರುಗಿತು. ಜಿಲ್ಲಾ ವೈದ್ಯಕೀಯ ಕಚೇರಿ (ಆರೋಗ್ಯ) ಮತ್ತು ರಾಷ್ಟ್ರೀಯ ಆರೋಗ್ಯ ಮಿಷನ್ ಜಂಟಿಯಾಗಿ ಕಾರ್ಯಕ್ರಮ ಆಯೋಜಿಸಿತ್ತು.
ಗ್ರಾಮ ಪಂಚಾಯಿತಿ ಅಧ್ಯಕ್ಷ ಟಿ.ವಿ. ಜಯಚಂದ್ರನ್ ಸಮಾರಂಭ ಉದ್ಘಾಟಿಸಿದರು. ಗ್ರಾಮ ಪಂಚಾಯಿತಿ ಸದಸ್ಯೆ ಸಜಿತಾಶ್ರೀಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಉಪ ಜಿಲ್ಲಾ ವೈದ್ಯಾಧಿಕಾರಿ ಡಾ. ಅಜಯ್ ರಾಜನ್, ವಾರ್ಡ್ ಸದಸ್ಯೆ ಜಾಲಿ ಥಾಮಸ್, ಕುಟುಂಬ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಕಿ ಪಿ. ಕೆ. ಜಿಶಾ, ಜಿಲ್ಲಾ ಉಪಶಾಮಕ ಸಂಯೋಜಕ ಶಿಜಿ ಶೇಖರ್ ಉಪಸ್ಥಿತರಿದ್ದರು.
ಎಣ್ಣಪ್ಪಾರ ಕುಟುಂಬ ಆರೋಗ್ಯ ಕೇಂದ್ರದ ವೈದ್ಯಕೀಯ ಅಧಿಕಾರಿ ಡಾ. ಎಂ. ವಿ. ಕೃಪೇಶ್ ಸ್ವಾಗತಿಸಿದರು. ಸಾರ್ವಜನಿಕ ಆರೋಗ್ಯ ದಾದಿ ಕೆ. ಶ್ರೀಜಾ ವಂದಿಸಿದರು. ಕಾರ್ಯಕ್ರ ಕಾರ್ಯಕ್ರಮದ ಅಂಗವಾಗಿ ಜಾಗೃತಿ ವಿಚಾರ ಸಂಕಿರಣ ಮತ್ತು ಉಪಶಮನ ಸ್ವಯಂಸೇವಕರ ಸಭೆಯನ್ನು ಆಯೋಜಿಸಲಾಯಿತು. ಕ್ಯಾನ್ಸರ್ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಈ ದಿನದ ಪ್ರಮುಖ ಉದ್ದೇಶವಾಗಿದ್ದು, 'ನಮ್ಮ ಭಿನ್ನಾಭಿಪ್ರಾಯಗಳ ಹೊರತಾಗಿಯೂ ಬದುಕುಳಿಯಲು ನಾವು ಒಂದಾಗೋಣ' ಎಂಬ ಸಂದೇಶದೊಂದಿಗೆ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದು ಜಿಲ್ಲಾ ವೈದ್ಯಾಧಿಕಾರಿ (ಆರೋಗ್ಯ) ಡಾ. ಎ ವಿ. ರಾಮದಾಸ್ ತಿಳಿಸಿದರು.


