HEALTH TIPS

ಭಾರತ-ಅಮೆರಿಕ ಒಪ್ಪಂದ: ದೇಶದ ಜನರಿಗೆ ಉದ್ಯೋಗವಕಾಶದ ದಾರಿ ಎಂದ ಪಿಯೂಷ್ ಗೋಯಲ್

ನವದೆಹಲಿ: ಭಾರತ ಮತ್ತು ಅಮೆರಿಕ ವ್ಯಾಪಾರ ಒಪ್ಪಂದದಿಂದ ದೇಶದಲ್ಲಿ ಹೆಚ್ಚಿನ ಉದ್ಯೋವಕಾಶಗಳು ಸೃಷ್ಟಿಯಾಗಲಿದೆ ಎಂದು ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ.

ಭಾರತದಿಂದ ಆಮದು ಆಗುವ ಸರಕುಗಳಿಗೆ ಸುಂಕ ಕಡಿತ ಸೇರಿದಂತೆ ಅಮೆರಿಕದ ನಡುವಿನ ದ್ವಿಪಕ್ಷೀಯ ವ್ಯಾಪಾರ ಒಪ್ಪಂದ ಅಂತಿಮಗೊಂಡಿದೆ ಎಂದು ಟ್ರಂಪ್‌ ಸೋಮವಾರ ಘೋಷಿಸಿದ್ದರು.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಪಿಯೂಷ್, ಈ ಒಪ್ಪಂದ ಭಾರತದ ಹಿತಾಸಕ್ತಿಗಳಿಗೆ ಆದ್ಯತೆ ನೀಡಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರೊಂದಿಗೆ ಉತ್ತಮ ಸ್ನೇಹವನ್ನು ಕಾಯ್ದುಕೊಂಡಿದ್ದಾರೆ. ಹೀಗಾಗಿಯೇ ದ್ವಿಪಕ್ಷೀಯ ಮಾತುಕತೆಯನ್ನು ಅಂತಿಮಗೊಳಿಸಿರುವುದಾಗಿ ಹೇಳಿದ್ದಾರೆ.

ನಮ್ಮ ನೆರೆಹೊರೆಯವರೆಗೆ ಹಾಗೂ ನಮ್ಮ ದೇಶದೊಂದಿಗೆ ಸ್ಪರ್ಧಿಸುವ ಇತರೆ ದೇಶಗಳಿಗೆ ಹೋಲಿಸಿದರೆ ಅಮೆರಿಕದೊಂದಿಗೆ ಭಾರತ ಮಾಡಿಕೊಂಡ ಒಪ್ಪಂದ ಅತ್ಯುತ್ತಮದಾಗಿದೆ ಎಂದು ಪಿಯೂಷ್ ಹೇಳಿದ್ದಾರೆ.

ಈ ಒಪ್ಪಂದ 2027ರ ವಿಕಸಿತ ಭಾರತದ ಕಲ್ಪನೆಗೆ ಮತ್ತಷ್ಟು ವೇಗ ನೀಡಲಿದೆ. ಇದರಿಂದ ಉದ್ಯಮ ಸೇರಿದಂತೆ ಎಲ್ಲಾ ಕ್ಷೇತ್ರದ ಜನರಿಗೆ ಉದ್ಯೋಗವಕಾಶ ಒದಗಿಸುತ್ತದೆ ಎಂದು ಪಿಯೂಷ್ ತಿಳಿಸಿದ್ದಾರೆ.

ಭಾರತ ಮತ್ತು ಅಮೆರಿಕ ನಡುವಿನ ದ್ವಿಪಕ್ಷೀಯ ವ್ಯಾಪಾರ ಒಪ್ಪಂದ ಅಂತಿಮಗೊಂಡಿದೆ. ಭಾರತವು ರಷ್ಯಾದಿಂದ ತೈಲ ಖರೀದಿಸುವುದನ್ನು ನಿಲ್ಲಿಸಲು ಮತ್ತು ವೆನೆಜುವೆಲಾದಿಂದ ಹೆಚ್ಚಿನ ತೈಲ ಖರೀದಿಸಲು ಒಪ್ಪಿಕೊಂಡಿದೆ. ಅದಕ್ಕೆ ಪ್ರತಿಯಾಗಿ ಅಮೆರಿಕವು ಪ್ರತಿಸುಂಕವನ್ನು ಪ್ರಸ್ತುತ ಶೇ 25ರಿಂದ ಶೇ 18ಕ್ಕೆ ಇಳಿಸಲಿದೆ ಎಂದು ಟ್ರಂಪ್‌ ತಿಳಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries