HEALTH TIPS

ನುಳ್ಳಿಪ್ಪಾಡಿ ಶ್ರೀ ಅಯ್ಯಪ್ಪ ಕ್ಷೇತ್ರ ಬ್ರಹ್ಮಕಲಶೋತ್ಸವ-ನಾಳೆ ಆಮಂತ್ರಣ ಪತ್ರಿಕೆ ಬಿಡುಗಡೆ

ಕಾಸರಗೋಡು: ನುಳ್ಳಿಪ್ಪಾಡಿ ಶ್ರೀ ಅಯ್ಯಪ್ಪ ಸ್ವಾಮೀ ಕ್ಷೇತ್ರದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವವು ಏಪ್ರಿಲ್ 18ರಿಂದ 23ರ ವರೆಗೆ ವಿವಿಧ ವೈದಿಕ, ಧಾರ್ಮಿಕ ಹಾಗೂ ಸಾಂಸ್ಕøತಿಕ ಕಾರ್ಯಕ್ರಮಗಳೊಂದಿಗೆ ಜರಗಲಿದ್ದು, ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಫೆ.3ರಂದು ಬೆಳಗ್ಗೆ 9 ಗಂಟೆಗೆ ಶ್ರೀ ಕ್ಷೇತ್ರದಲ್ಲಿ ಜರಗಲಿದೆ. 

ಸಮಾರಂಭದಲ್ಲಿ ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಯವರು ಆಶೀರ್ವಚನ ನೀಡುವರು. ಶ್ರೀ ಕ್ಷೇತ್ರದ ತಂತ್ರಿವರ್ಯರಾದ ಬ್ರಹ್ಮಶ್ರೀ ಉಳಿಯತ್ತಾಯ ವಿಷ್ಣು ಆಸ್ರ ಅವರು ದಿವ್ಯ ಉಪಸ್ಥಿತರಿರುವರು. ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಬಿ.ವಸಂತ ಪೈ ಬದಿಯಡ್ಕ, ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಕೃಷ್ಣಪ್ರಸಾದ್ ಕೋಟೆಕಣಿ, ಶ್ರೀ ಕ್ಷೇತ್ರ ಟ್ರಸ್ಟ್  ಅಧ್ಯಕ್ಷ ಗಣೇಶ್ ಅಮೈ ಮೊದಲಾದವರು ಭಾಗವಹಿಸುವರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries