ಮಂಗಳೂರು: ಕೇರಳ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೇರಳ-ಕರ್ನಾಟಕ ಗಡಿಯನ್ನು ಹಂಚಿಕೊಳ್ಳುವ ಜಿಲ್ಲೆಗಳ ಉನ್ನತ ಅಧಿಕಾರಿಗಳ ಸಭೆ ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರದಲ್ಲಿ ನಿನ್ನೆ ನಡೆಯಿತು.
ಕಾಸರಗೋಡು ಜಿಲ್ಲಾಧಿಕಾರಿ ಕೆ.ಇಂನ್ಬಾಶೇಖರ್, ಕಾಸರಗೋಡು ಜಿಲ್ಲಾ ಪೋಲೀಸ್ ಮುಖ್ಯಸ್ಥ ವಿಜಯಭರತ್ ರೆಡ್ಡಿ, ದಕ್ಷಿಣ ಕನ್ನಡ ಉಪ ಆಯುಕ್ತ ಎಚ್.ವಿ. ದರ್ಶನ್, ದಕ್ಷಿಣ ಕನ್ನಡ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಡಾ. ಕೆ. ಅರುಣ್, ಜಿಎಸ್ಟಿ ಇಲಾಖೆಯ ಜಂಟಿ ಆಯುಕ್ತ ಪಿ.ಸಿ. ಜಯರಾಜನ್, ಉಪ ಅಬಕಾರಿ ಆಯುಕ್ತರು, ಅರಣ್ಯ ಅಧಿಕಾರಿಗಳು ಮುಂತಾದವರು ಸಭೆಯಲ್ಲಿ ಭಾಗವಹಿಸಿದ್ದರು.



