ರಾಹುಲ್ ಗಾಂಧಿ ವಿರುದ್ಧ ಸಂಪೂರ್ಣ ಹಕ್ಕುಚ್ಯುತಿ ನಿರ್ಣಯಕ್ಕೆ ಬಿಜೆಪಿ ಸಂಸದರು ಸಿದ್ಧತೆ ನಡೆಸಿದ್ದಾರೆ. ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಮತ್ತು ಕೇಂದ್ರ ಬಜೆಟ್ ಅನ್ನು ಕಟುವಾಗಿ ಟೀಕಿಸಿದ ಒಂದು ದಿನದ ಬಳಿಕ ಬಿಜೆಪಿ ಈ ನಿಲುವು ತೆಗೆದುಕೊಂಡಿದೆ.
ರಾಹುಲ್ ಗಾಂಧಿ ಅವರು ಸರ್ಕಾರದ ವಿರುದ್ಧ ಆಧಾರರಹಿತ ಆರೋಪಗಳನ್ನು ಮಾಡಿದ್ದಾರೆ ಎಂದು ಆರೋಪಿಸಿರುವ ಬಿಜೆಪಿ ನಾಯಕರು, ಅವರ ವಿರುದ್ಧ ಸಂಪೂರ್ಣ ಹಕ್ಕುಚ್ಯುತಿ ನಿರ್ಣಯ (Privilege Motion) ಮಂಡಿಸಲು ಸಿದ್ಧತೆ ನಡೆಸಿದ್ದಾರೆ.
ಬುಧವಾರ ಲೋಕಸಭೆಯಲ್ಲಿ ಕೇಂದ್ರ ಬಜೆಟ್ ಮೇಲಿನ ತಮ್ಮ ಭಾಷಣದಲ್ಲಿ ರಾಹುಲ್ ಗಾಂಧಿ ಅವರು ಭೌಗೋಳಿಕ ರಾಜಕೀಯ ಸಂಘರ್ಷ, ಕೃತಕ ಬುದ್ಧಿಮತ್ತೆ ಮತ್ತು ಅಮೆರಿಕದ ಜೊತೆಗಿನ ವ್ಯಾಪಾರ ಒಪ್ಪಂದದ ಕುರಿತು ಮಾತನಾಡಿದ್ದರು.

