HEALTH TIPS

ಕ್ರಿಮಿನಲ್ ಕಾನೂನು ಸಂಪೂರ್ಣ ಜಾರಿಯಾದರೆ ಶಿಕ್ಷೆ ಪ್ರಮಾಣ ಹೆಚ್ಚುತ್ತದೆ: ಅಮಿತ್ ಶಾ

ನವದೆಹಲಿ: ಮುಂದಿನ ದಿನಗಳಲ್ಲಿ ದೇಶದಲ್ಲಿ ಮೂರು ಹೊಸ ಕ್ರಿಮಿನಲ್ ಕಾನೂನು ಸಂಪೂರ್ಣ ಜಾರಿಯಾಗುತ್ತವೆ. ಅದಾದ ಬಳಿಕ ಅಪರಾಧ ಪ್ರಕರಣಗಳಲ್ಲಿ ಶಿಕ್ಷೆಯ ಪ್ರಮಾಣವು ಶೇ 80ರಷ್ಟು ಹೆಚ್ಚಾಗಲಿದೆ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ತಿಳಿಸಿದ್ದಾರೆ.

ಸೋಮವಾರ ದೆಹಲಿಯಲ್ಲಿ ನಡೆದ 79ನೇ ರೈಸಿಂಗ್ ಡೇ ಪರೇಡ್‌ನಲ್ಲಿ ಭಾಗವಸಿದ್ದ ಅಮಿತ್ ಶಾ, ಪೊಲೀಸರನ್ನು ಉದ್ದೇಶಿಸಿ ಮಾತನಾಡಿದ್ದಾರೆ.

ಮೂರು ಹೊಸ ಕ್ರಿಮಿನಲ್ ಕಾನೂನುಗಳು ದೇಶದ ಕಾನೂನು ವ್ಯವಸ್ಥೆಯಲ್ಲಿ ಅತಿ ದೊಡ್ಡ ಸುಧಾರಣೆಯಾಗಿದೆ. ಇದು ವೇಗವಾಗಿ ಪ್ರಕರಣಗಳನ್ನು ಇತ್ಯರ್ಥಗೊಳಿಸುವುದಕ್ಕೆ ಹಾಗೂ ಶಿಕ್ಷೆ ವಿಧಿಸಲು ನೆರವಾಗಲಿದೆ. ಕೆಲವೇ ವರ್ಷಗಳಲ್ಲಿ ಇದು ಸಂಪೂರ್ಣ ಜಾರಿಯಾಗಲಿದೆ ಎಂದು ಹೇಳಿದ್ದಾರೆ.

ಭಾರತೀಯ ದಂಡ ಸಂಹಿತೆ(ಐಪಿಸಿ), ಅಪರಾಧ ದಂಡಪ್ರಕ್ರಿಯಾ ಸಂಹಿತೆ(ಸಿಆರ್‌ಪಿಸಿ) ಮತ್ತು ಭಾರತೀಯ ಸಾಕ್ಷ್ಯ ಕಾಯ್ದೆಯ ಬದಲಿಗೆ ಭಾರತೀಯ ನ್ಯಾಯ ಸಂಹಿತೆ(ಬಿಎನ್‌ಎಸ್), ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್‌ಎಸ್‌ಎಸ್) ಹಾಗೂ ಭಾರತೀಯ ಸಾಕ್ಷ್ಯ ಅಧಿನಿಯಮ (ಬಿಎಸ್‌ಎ)ವನ್ನು 2024ರ ಜುಲೈ 1ರಂದು ಜಾರಿಗೊಳಿಸಲಾಗಿತ್ತು.

ದೇಶದಲ್ಲಿ ನಕ್ಸಲರ ವಿರುದ್ಧದ ಹೋರಾಟವು ಅಂತಿಮ ಹಂತಕ್ಕೆ ಬಂದಿದೆ. ಮಾರ್ಚ್‌ ವೇಳೆಗೆ ಅದು ಸಂಪೂರ್ಣ ಕೊನೆಗೊಳ್ಳಲಿದೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.

ಕಾರ್ಯಕ್ರಮದಲ್ಲಿ ಅಮಿತ್ ಶಾ ಅವರು ಪೊಲೀಸ್‌ ವಿಭಾಗಕ್ಕೆ ಸಂಬಂಧಿಸಿದ ವಿವಿಧ ಯೋಜನೆಗಳಿಗೆ ಚಾಲನೆ ನೀಡಿದರು. ಸೇಫ್ ಸಿಟಿ ಯೋಜನೆ ಅಡಿಯಲ್ಲಿ ದೆಹಲಿಯಲ್ಲಿ 10 ಸಾವಿರ ಎಐ ಆಧಾರಿತ ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗುತ್ತಿದ್ದು, ಮೊದಲ ಹಂತದಲ್ಲಿ 2,100 ಸಿಸಿಟಿವಿ ಕ್ಯಾಮೆರಾ ಅಳವಡಿಕೆಗೆ ಚಾಲನೆ ನೀಡಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries