ಚಂಡೀಗಢ: ಪಂಜಾಬ್‌ನಲ್ಲಿ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಲಕ್ಕಿ ಒಬೆರಾಯ್ ಅವರನ್ನು ಗುಂಡಿಕ್ಕಿ ಹತ್ಯೆಗೈಯಲಾಗಿದೆ.
ಜಲಂಧರ್‌ನ ಮಾಡೆಲ್ ಟೌನ್‌ನಲ್ಲಿರುವ ಗುರುದ್ವಾರದ ಹೊರಗೆ ಶುಕ್ರವಾರ ದುಷ್ಕರ್ಮಿಗಳು ಗುಂಡಿಕ್ಕಿ ಕೊಲೆಗೈದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಒಬೆರಾಯ್ ತಮ್ಮ ಕಾರಿನಲ್ಲಿ ಬೆಳಿಗ್ಗೆ ಗುರುದ್ವಾರಕ್ಕೆ ಆಗಮಿಸಿದಾಗ ದ್ವಿಚಕ್ರ ವಾಹನದಲ್ಲಿ ಬಂದ ಅಪರಿಚಿತರು ಗುಂಡಿಕ್ಕಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ದುಷ್ಕರ್ಮಿಗಳು ಕನಿಷ್ಠ ಐದು ರೌಂಡ್ ಗುಂಡು ಹಾರಿಸಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಪ್ರಕರಣ ಸಂಬಂಧ ತನಿಖೆ ಪ್ರಗತಿಯಲ್ಲಿದೆ ಎಂದು ಅವರು ಹೇಳಿದ್ದಾರೆ.

