ಕಾಸರಗೋಡು: ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ಪದಾಧಿಕಾರಿಗಳು ಕೇರಳದ ಪ್ರತಿಪಕ್ಷ ಮುಖಂಡ ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದರು.
ನಿಯೋಗದಲ್ಲಿ ಕರ್ನಾಟಕ ಸಮಿತಿ ಅಧ್ಯಕ್ಷ ವಕೀಲ ಮುರಳೀಧರ ಬಳ್ಳಕ್ಕುರಾಯ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಎ. ಆರ್. ಸುಬ್ಬಯಕಟ್ಟೆ, ಗಮಕ ಕಲಾ ಪರಿಷತ್ತು ಗಡಿನಾಡ ಘಟಕದ ಅಧ್ಯಕ್ಷ ಟಿ. ಶಂಕರ ನಾರಾಯಣ ಭಟ್, ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕದ ಅಧ್ಯಕ್ಷ ಡಾ ಜಯಪ್ರಕಾಶ್ ನಾರಾಯಣ ತೊಟ್ಟೆತ್ತೋಡಿ, ಗಡಿನಾಡ ಸಾಹಿತ್ಯ ಸಾಂಸ್ಕøತಿಕ ಅಕಾಡೆಮಿ ಕಾರ್ಯದರ್ಶಿ ಅಖಿಲೇಶ್ ನಗುಮುಗಮ್ ಮೊದಲಾದವರು ಉಪಸ್ಥಿತರಿದ್ದರು.


