ಇಂಫಾಲ: ಮಣಿಪುರದ ಇಂಫಾಲ್ ಪೂರ್ವ ಜಿಲ್ಲೆಯಲ್ಲಿ ಇಬ್ಬರು ಬಂಡುಕೋರರನ್ನು ಬಂಧಿಸಲಾಗಿದೆ ಎಂದು ಬುಧವಾರ ಪೊಲೀಸರು ತಿಳಿಸಿದ್ದಾರೆ.
ಪೀಪಲ್ ಲಿಬರೇಷನ್ ಆರ್ಮಿಯ (ಪಿಎಲ್‌ಎ) ಲೆಫ್ಟಿನೆಂಟ್ ಎಂದು ಘೋಷಿಸಿಕೊಂಡಿದ್ದ ವ್ಯಕ್ತಿಯನ್ನು ಮಂಗಳವಾರ ಬಂಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಇಂಫಾಲ್ ಪೂರ್ವ ಜಿಲ್ಲೆಯಲ್ಲಿ ನಡೆದ ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಪಿಎಲ್‌ಎ ಸದಸ್ಯನನ್ನು ಬಂಧಿಸಲಾಗಿದೆ ಮತ್ತು ಶಸ್ತ್ರಾಸ್ತ್ರ, ಮದ್ದುಗುಂಡುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

