HEALTH TIPS

ರಾಜಸ್ಥಾನ: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಅಗ್ನಿ ಅವಘಡ; ಏಳು ಮಂದಿ ಸಜೀವ ದಹನ

ಭಿವಾಡಿ: ರಾಜಸ್ಥಾನದ ಖೈರ್ತಾಲ್-ತಿಜಾರಾ ಜಿಲ್ಲೆಯ ಭಿವಾಡಿ ಪಟ್ಟಣದಲ್ಲಿ ಸೋಮವಾರ ಅಕ್ರಮ ಪಟಾಕಿ ತಯಾರಿಕೆ ಕಾರ್ಖಾನೆಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಕನಿಷ್ಠ ಏಳು ಜನ ಸಜೀವ ದಹನಗೊಂಡಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. "ಘಟನೆಯಲ್ಲಿ ಏಳು ಜನರು ಸಾವನ್ನಪ್ಪಿದ್ದಾರೆ.

ಅದು ಗಾರ್ಮೆಂಟ್ ಕಾರ್ಖಾನೆಯಾಗಿತ್ತು. ಆದರೆ ಅದರೊಳಗೆ ಅಕ್ರಮವಾಗಿ ಪಟಾಕಿಗಳನ್ನು ತಯಾರಿಸಲಾಗುತ್ತಿತ್ತು" ಎಂದು ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಸುಮಿತ್ರಾ ಪರೀಕ್ ಅವರು ಪಿಟಿಐಗೆ ತಿಳಿಸಿದ್ದಾರೆ.

ಕಾರ್ಖಾನೆಯಲ್ಲಿ ಇನ್ನೂ ಇಬ್ಬರು ಸಿಲುಕಿಕೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.

"ಗಾರ್ಮೆಂಟ್ ಕಾರ್ಖಾನೆಯ ಹೆಸರಿನಲ್ಲಿ ಆವರಣವನ್ನು ಗುತ್ತಿಗೆಗೆ ನೀಡಲಾಗಿದೆ. ಆದರೆ ಅದರಲ್ಲಿ ಪಟಾಕಿಗಳನ್ನು ಅಕ್ರಮವಾಗಿ ತಯಾರಿಸಲಾಗುತ್ತಿತ್ತು" ಎಂದು ಅವರು ತಿಳಿಸಿದ್ದಾರೆ.

ಪೊಲೀಸರು ನಿಯಮಿತ ಗಸ್ತು ತಿರುಗುತ್ತಿದ್ದಾಗ ಬೆಂಕಿ ಅವಘಡವನ್ನು ಗಮನಿಸಿದ್ದಾರೆ. ನಂತರ ತಕ್ಷಣವೇ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು ಎಂದು ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಹೇಳಿದ್ದಾರೆ.

ಜಿಲ್ಲಾಧಿಕಾರಿ ಅರ್ತಿಕಾ ಶುಕ್ಲಾ ಮತ್ತು ಇತರ ಹಿರಿಯ ಜಿಲ್ಲಾಡಳಿತ ಹಾಗೂ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ, ರಕ್ಷಣಾ ಕಾರ್ಯಾಚರಣೆ ನಡೆಸಿದರು.

ಪ್ರಾಥಮಿಕ ವರದಿಯ ಪ್ರಕಾರ, ಘಟನೆಯ ಸಮಯದಲ್ಲಿ ಕಾರ್ಖಾನೆಯೊಳಗೆ 20 ಕ್ಕೂ ಹೆಚ್ಚು ಜನರಿದ್ದರು ಎನ್ನಲಾಗಿದೆ.

ಬೆಂಕಿ ಹೊತ್ತಿಕೊಂಡ ತಕ್ಷಣ, ಅನೇಕ ಕಾರ್ಮಿಕರು ಹೊರಬರುವಲ್ಲಿ ಯಶಸ್ವಿಯಾಗಿದ್ದು, ಒಂಬತ್ತು ಮಂದಿ ಒಳಗಡೆ ಸಿಲುಕಿಕೊಂಡರು. ಅವರಲ್ಲಿ ಏಳು ಮಂದಿ ಮೃತಪಟ್ಟಿದ್ದಾರೆ. ಒಂದೂವರೆ ಗಂಟೆಗೂ ಹೆಚ್ಚು ಕಾಲದ ನಂತರ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಯಿತು. ಕೆಲವು ಅಸ್ಥಿಪಂಜರಗಳನ್ನು ಸಹ ಹೊರತೆಗೆಯಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಏತನ್ಮಧ್ಯೆ, ಕಾರ್ಖಾನೆ ಕಾರ್ಮಿಕರ ಸಾವಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದು, ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಬೇಕೆಂದು ಪ್ರಾರ್ಥಿಸಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries