ಬದಿಯಡ್ಕ: ಕುಂಬಳೆ ಸೀಮೆಯ ಅತಿ ಪುರಾತನ ಕ್ಷೇತ್ರ ಪೆರಡಾಲ ಶ್ರೀ ಉದನೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಏಪ್ರಿಲ್ 17 ರಿಂದ 28 ತನಕ ವಿವಿಧ ಕಾರ್ಯಕ್ರಮಗಳೊಂದಿಗೆ ಜರಗಲಿರುವುದು. ಪೂರ್ವಭಾವಿಯಾಗಿ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಂನ ಶ್ರೀ ಗುರುದೇವಾನಂದ ಸ್ವಾಮೀಜಿ ಅವರಿಗೆ ಆಮಂತ್ರಣ ಪತ್ರಿಕೆಯನ್ನು ನೀಡಲಾಯಿತು. ಆಡಳಿತ ಮೊಕ್ತೇಸರ, ಕಾರ್ಯಾಧ್ಯಕ್ಷ ಜಗನ್ನಾಥ ರೈ ಪೆರಡಾಲ ಗುತ್ತು, ಬ್ರಹ್ಮಕಲಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ನಿರಂಜನ್ ರೈ ಪೆರಡಾಲ, ಸಹ ಕೋಶಾಕಾರಿ ಸತೀಶ್ ಕುಮಾರ್ ಪುದ್ಯೋಡು, ಜೊತೆ ಕಾರ್ಯದರ್ಶಿ ಭಾಸ್ಕರ ಪಂಜಿತಡ್ಕ, ಸದಸ್ಯ ವೆಂಕಟೇಶ್ವರ ಭಟ್ ಪಟ್ಟಾಜೆ ಉಪಸ್ಥಿತರಿದ್ದರು.

.jpg)
