HEALTH TIPS

ದೆಹಲಿಯಲ್ಲಿ ಸ್ಫೋಟಕ್ಕೆ ಸಂಚು:ಬಾಂಗ್ಲಾದೇಶಿ ಪ್ರಜೆಗಳು ಸೇರಿದಂತೆ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಭಯೋತ್ಪಾದನಾ ಕೃತ್ಯ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಮಂದಿ ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ಭಾನುವಾರ ತಿಳಿಸಿವೆ.

ಶಂಕಿತರಲ್ಲಿ ಆರು ಮಂದಿಯನ್ನು ತಮಿಳುನಾಡಿನ ವಿವಿಧ ಭಾಗಗಳಿಂದ ಬಂಧಿಸಲಾಗಿದ್ದು, ವಿಚಾರಣೆಗಾಗಿ ದೆಹಲಿಗೆ ಕರೆತರಲಾಗುವುದು. ಬಂಧಿತರಲ್ಲಿ ಕೆಲವರು ಬಾಂಗ್ಲಾದೇಶಿ ಪ್ರಜೆಗಳು ಎಂದು ಮೂಲಗಳು ತಿಳಿಸಿವೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ವ್ಯಕ್ತಿಗಳನ್ನು ಮೊದಲೇ ಬಂಧಿಸಲಾಗಿತ್ತು.

ಪಾಕಿಸ್ತಾನ ಮೂಲದ ಭಯೋತ್ಪಾದನಾ ಸಂಘಟನೆ ಲಷ್ಕರ್ ಎ ತಯ್ಯಬಾ(ಎಲ್‌ಇಟಿ) ಭಾರತದ ಪ್ರಮುಖ ಧಾರ್ಮಿಕ ಸ್ಥಳಗಳನ್ನು ತನ್ನ ವಿಧ್ವಂಸಕ ಕೃತ್ಯಕ್ಕೆ ಗುರಿಯಾಗಿಸಿಕೊಂಡಿದೆ ಎಂದು ಕೇಂದ್ರ ಗುಪ್ತಚರ ಸಂಸ್ಥೆಗಳು ಮಾಹಿತಿ ಹಂಚಿಕೊಂಡಿತ್ತು. ಕೆಂಪು ಕೋಟೆ ಬಳಿ ಭಾರಿ ಸ್ಫೋಟ ನಡೆಸುವ ಸಾಧ್ಯತೆ ಹಿನ್ನೆಲೆಯಲ್ಲಿ ಹೈಅಲರ್ಟ್ ಘೋಷಿಸಲಾಗಿತ್ತು.

ದೇಶದ ವಿವಿಧ ಭಾಗಗಳಲ್ಲಿ ವಿಧ್ವಂಸಕ ಚಟುವಟಿಕೆಗಳಿಗೆ ಜಾಲವೊಂದು ಯೋಜನೆ ರೂಪಿಸುತ್ತಿದೆ ಎಂಬ ಬಗ್ಗೆ ನಿರ್ದಿಷ್ಟ ಗುಪ್ತಚರ ಮಾಹಿತಿಯ ನಂತರ ಈ ಕಾರ್ಯಾಚರಣೆ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಶೋಧದ ಸಮಯದಲ್ಲಿ, ಅವರ ಬಳಿಯಿಂದ ಡಜನ್‌ಗಟ್ಟಲೆ ಮೊಬೈಲ್ ಫೋನ್‌ಗಳು ಮತ್ತು ಸಿಮ್ ಕಾರ್ಡ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇವುಗಳನ್ನು ಜಾಲದ ವ್ಯಾಪ್ತಿ ಮತ್ತು ಸಂಭವನೀಯ ವಿದೇಶಿ ಸಂಪರ್ಕಗಳನ್ನು ಖಚಿತಪಡಿಸಿಕೊಳ್ಳಲು ವಿಶ್ಲೇಷಿಸಲಾಗುತ್ತಿದೆ.

ಪ್ರಾಥಮಿಕ ತನಿಖೆಯ ಪ್ರಕಾರ, ಈ ಗುಂಪು ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಕೆಲವು ಸಂಘಟನೆಗಳೊಂದಿಗೆ ಸಂಪರ್ಕದಲ್ಲಿತ್ತು.

ಕೇಂದ್ರೀಯ ಸಂಸ್ಥೆಗಳು ತನಿಖೆಗೆ ಸಹಾಯ ಮಾಡುತ್ತಿವೆ ಎಂದು ಮೂಲಗಳು ತಿಳಿಸಿವೆ.

ಸುಧಾರಿತ ಸ್ಫೋಟಕ ಸಾಧನ (ಐಇಡಿ) ಆಧಾರಿತ ದಾಳಿ ನಡೆಸಲು ಎಲ್‌ಇಟಿ ಪ್ರಯತ್ನಿಸುತ್ತಿದೆ ಎಂದು ಗುಪ್ತಚರ ಸಂಸ್ಥೆಗಳು ಮಾಹಿತಿ ನೀಡಿದ್ದವು. ಫೆಬ್ರುವರಿ 6ರಂದು ಪಾಕಿಸ್ತಾನದ ಇಸ್ಲಾಮಾಬಾದ್‌ನ ಮಸೀದಿಯಲ್ಲಿ ನಡೆದ ಸ್ಫೋಟಕ್ಕೆ ಪ್ರತೀಕಾರ ತೀರಿಸಿಕೊಳ್ಳಲು ಭಯೋತ್ಪಾದಕ ಗುಂಪಿನ ಯೋಜನೆ ಇದಾಗಿದೆ ಎಂದು ಮೂಲಗಳು ತಿಳಿಸಿವೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries