ಲಂಡನ್: ಬರ್ಮಿಂಗ್ಹಾಮ್‍ನಲ್ಲಿ ಆಯೋಜಿಸಿದ್ದ ಯಹೂದಿ ವಿರೋಧಿ ಅಭಿಯಾನದ ಉದ್ಘಾಟನಾ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಇರಾನ್‍ನ ಸರಕಾರಿ ಸ್ವಾಮ್ಯದ ಪ್ರೆಸ್ ಟಿವಿಯ ಲಂಡನ್ ಮೂಲದ ಪತ್ರಕರ್ತೆಯನ್ನು ಬ್ರಿಟನ್ ಪೊಲೀಸರು ಭಾನುವಾರ ಬಂಧಿಸಿರುವುದಾಗಿ ವರದಿಯಾಗಿದೆ.
35 ವರ್ಷದ ಲತೀಫಾ ಅಬೌಚಕ್ರ ಅವರನ್ನು `ಜನಾಂಗೀಯ ದ್ವೇಷವನ್ನು ಪ್ರಚೋದಿಸುವ' ಆರೋಪದಲ್ಲಿ ಬಂಧಿಸಲಾಗಿದೆ. ಯೆಹೂದಿ ವಿರೋಧಿ ಅಭಿಯಾನದ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಳ್ಳಲು ತೆರಳುತ್ತಿದ್ದಾರೆ ಎಂಬ ಮಾಹಿತಿಯ ಮೇರೆಗೆ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ. ಲತೀಫಾ ಕಳೆದ ವರ್ಷ ಮೇ ತಿಂಗಳಿಂದ ಅಕ್ಟೋಬರ್ ಅವಧಿಯಲ್ಲಿ ಸಾಮಾಜಿಕ ಮಾಧ್ಯಮದ ಪೋಸ್ಟ್‌ಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕ ಸುವ್ಯವಸ್ಥೆ ಕಾಯ್ದೆಯಡಿಯ ಅಪರಾಧಕ್ಕಾಗಿ ಪೊಲೀಸರ `ವಾಂಟೆಡ್ ಲಿಸ್ಟ್'ನಲ್ಲಿದ್ದರು ಎಂದು ವೆಸ್ಟ್ ಮಿಡ್ಲ್ಯಾಂಡ್ಸ್ ಪೊಲೀಸರು ಹೇಳಿದ್ದಾರೆ.

