HEALTH TIPS

ಮೀಯಪದವಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ

ಮಂಜೇಶ್ವರ: ಮೀಯಪದವು ಶ್ರೀ ವಿದ್ಯಾವರ್ಧಕ ಉನ್ನತ ಪ್ರೌಢ ಶಾಲೆ, ವಿದ್ಯಾವರ್ಧಕ ಪ್ರೌಢ ಪ್ರಾಥಮಿಕ ಶಾಲೆ, ಮಾಸ್ಟರ್ಸ್ ಆಟ್ರ್ಸ್-ಸ್ಪೋಟ್ರ್ಸ್ ಕ್ಲಬ್, ವಿಕಾಸ ಮೀಯಪದವು ಇದರ ನೇತೃತ್ವದಲ್ಲಿ ಜಗದ್ಗುರು ಶ್ರೀ ನಿತ್ಯಾನಂದ ಮಹಾಪೀಠಂ ಚಾರಿಟೇಬಲ್ ಟ್ರಸ್ಟ್ ಕೊಂಡೆವೂರು ಹಾಗೂ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಂಗಳೂರು, ಡಾ. ದಯಾನಂದ ಪೈ ಮತ್ತು ಸತೀಶ್ ಪೈ ಚಾರಿಟೇಬಲ್ ಟ್ರಸ್ಟ್ ಒನ್ ಸೈಟ್ ಎಸ್ಸಿ ಲೋರ್ ಲಕ್ಸೋಟಿಕ ಫೌಂಡೇಶನ್ ಬೆಂಗಳೂರು ಇವರ ಸಹಯೋಗದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ ಮೀಯಪದವು ಶ್ರೀ ವಿದ್ಯಾವರ್ಧಕ ಉನ್ನತ ಪ್ರೌಢ ಶಾಲೆಯಲ್ಲಿ ಭಾನುವಾರ ಜರಗಿತು. ಕೊಂಡೆವೂರು ಶ್ರೀನಿತ್ಯಾನಂದ ಯೋಗಾಶ್ರಮದ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ  ಕಾರ್ಯಕ್ರಮ ಉದ್ಘಾಟಿಸಿ ಆಶೀವರ್ಚನ ನೀಡಿದರು. ಶಾಲಾ ಸಂಚಾಲಕ ಡಾ. ಜಯಪ್ರಕಾಶ ನಾರಾಯಣ ತೊಟ್ಟೆತ್ತೋಡಿ ಅಧ್ಯಕ್ಷತೆ ವಹಿಸಿದ್ದರು. ಪ್ರಸಾದ್ ನೇತ್ರಾಲಯದ ವೈದ್ಯಾಧಿಕಾರಿ ಡಾ.ಪ್ರೇಮ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಸ್ತುತ ಸಮಾಜದಲ್ಲಿ ಆಬಾಲವೃದ್ಧರಾಗಿ ಕಾಡುತ್ತಿರುವ ಆರೋಗ್ಯ ಸಮಸ್ಯೆಗಳಲ್ಲಿ ಕಣ್ಣಿನ ಸಮಸ್ಯೆ ಮುಖ್ಯವಾಗಿದ್ದು ಅತಿಯಾದ ಮೊಬೈಲ್ ಬಳಕೆ ಇದಕ್ಕೆ ಪ್ರತ್ಯಕ್ಷ ಕಾರಣವಾಗುತ್ತಿದೆ. ಕಣ್ಣಿನ ಮಹತ್ವವನ್ನರಿತು ವ್ಯಕ್ತಿ ನೇತ್ರದ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು ಎಂದರು. 

ನಿವೃತ್ತ ಮುಖ್ಯ ಶಿಕ್ಷಕ ಶ್ರೀಧರ ರಾವ್ ಆರ್.ಯಂ., ಮಾಸ್ಟರ್ಸ್ ಕ್ಲಬ್ ಅಧ್ಯಕ್ಷ ಕೆ.ವಿ. ರಾಧಾಕೃಷ್ಣ ಭಟ್ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು. ಶಾಲಾ ಪ್ರಭಾರ ಪಾಂಶುಪಾಲ ರವಿಲೋಚನ ಚೆಕ್ಕೆಮನೆ, ಪ್ರೌಢ ಶಾಲಾ ಮುಖ್ಯ ಶಿಕ್ಷಕಿ ಮೃದುಲಾ ಕೆ.ಯಂ., ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಅರವಿಂದಾಕ್ಷ ಭಂಡಾರಿ, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಇಬ್ರಾಹಿಂ ಹೊನ್ನಕಟ್ಟೆ, ಮಾತೃ ಮಂಡಳಿ ಅಧ್ಯಕ್ಷೆ ನಬೀಸತುಲ್ ಮಿಸ್ರಿಯ, ಕೃಷ್ಣ ಪ್ರಸನ್ನ ಮಿತ್ತಾಳ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ 200 ಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಉತ್ಸುಕತೆಯಿಂದ ಪಾಲ್ಗೊಂಡು ಶಿಬಿರದ ಫಲಾನುಭವಿಗಳಾದರು. ಮುಖ್ಯ ಶಿಕ್ಷಕ ಅರವಿಂದಾಕ್ಷ ಭಂಡಾರಿ ಸ್ವಾಗತಿಸಿ, ಮಾಸ್ಟರ್ಸ್ ಕ್ಲಬ್ ಗೌರವಧ್ಯಕ್ಷ ಪುಷ್ಪರಾಜ್ ಶೆಟ್ಟಿ ವಂದಿಸಿದರು. ಅಧ್ಯಾಪಕ ಕಿರಣ್ ಕೆ.ಎಸ್. ನಿರೂಪಿಸಿದರು. 



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries