ಬದಿಯಡ್ಕ: ಪೆರಡಾಲ ಶ್ರೀ ಉದನೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ, ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷ ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರನ್ನು ಭೇಟಿಯಾಗಿ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ನೀಡಿ ಆಶೀರ್ವಾದ ಪಡೆಯಲಾಯಿತು. ಆಡಳಿತ ಮಂಡಳಿ ಅಧ್ಯಕ್ಷ ವೆಂಕಟರಮಣ ಭಟ್ ಚಂಬಲ್ತಿಮಾರ್, ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ನಿರಂಜನ್ ರೈ ಪೆರಡಾಲ, ಕೋಶಾಧಿಕಾರಿ ಸೂರ್ಯನಾರಾಯಣ ಬಿ, ಆಹಾರ ಸಮಿತಿ ಪ್ರಧಾನ ಸಂಚಾಲಕ ಗಣೇಶ ಕೃಷ್ಣ ಅಳಕ್ಕೆ ನೇತೃತ್ವದಲ್ಲಿ ಶ್ರೀ ಕ್ಷೇತ್ರದ ಜೀರ್ಣೋದ್ಧಾರ ಕಾರ್ಯಗಳ ಸಂಪೂರ್ಣ ಮಾಹಿತಿಯನ್ನು ನೀಡಲಾಯಿತು.


