HEALTH TIPS

ಮಹಾರಾಷ್ಟ್ರ: ಇಬ್ಬರು ನಕ್ಸಲರ ಹತ್ಯೆ, ಭದ್ರತಾ ಸಿಬ್ಬಂದಿ ಹುತಾತ್ಮ

ಗಡಿಚಿರೋಲಿ: ಮಹಾರಾಷ್ಟ್ರದ ಗಡ್‌ಚಿರೋಲಿ ಜಿಲ್ಲೆಯಲ್ಲಿ ನಡೆದ ನಕ್ಸಲ್ ನಿಗ್ರಹ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಯ ಸಿಬ್ಬಂದಿಯೊಬ್ಬರು ಶುಕ್ರವಾರ ಹುತಾತ್ಮರಾಗಿದ್ದಾರೆ. ಇಬ್ಬರು ನಕ್ಸಲರೂ ಹತ್ಯೆಯಾಗಿದ್ದಾರೆ.

'ನಕ್ಸಲರ ಚಲನವಲನದ ಬಗ್ಗೆ ದೊರೆತ ಮಾಹಿತಿಯ ಆಧಾರದಲ್ಲಿ ಭಮ್ರಗಢದಲ್ಲಿ ಭದ್ರತಾ ಸಿಬ್ಬಂದಿ ಮಂಗಳವಾರ ಕಾರ್ಯಾಚರಣೆ ಆರಂಭಿಸಿದ್ದರು.

ಈ ಕಾರ್ಯಾಚರಣೆಯಲ್ಲಿ ಈವರೆಗೆ ಒಟ್ಟು ಮೂವರು ನಕ್ಸಲರನ್ನು ಹತ್ಯೆ ಮಾಡಲಾಗಿದೆ' ಎಂದು ಪೊಲೀಸರು ತಿಳಿಸಿದ್ದಾರೆ.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪೊಲೀಸ್‌ ಕಾನ್‌ಸ್ಟೇಬಲ್ ದೀಪಕ್ ಚಿನ್ನ ಮಾಡವಿ(38) ಅವರು ಮೃತಪಟ್ಟಿದ್ದಾರೆ. ಮತ್ತೊಬ್ಬ ಸಿಬ್ಬಂದಿ ಜೋಗ ಮಾಡವಿ ಕೂಡ ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ನಕ್ಸಲರ ಮೃತದೇಹ ಮತ್ತು ಎರಡು ರೈಫಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಮೃತ ನಕ್ಸಲರ ಗುರುತು ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries