ಕಾಸರಗೋಡು: ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘ(ರಿ) ಕಾಸರಗೋಡು ವತಿಯಿಂದ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗಾಗಿ ತಯಾರಿಸಿದ ಸಿಎಂ ಕಿಡ್ಸ್ ಸ್ಕೋಲರ್‍ಶಿಪ್ ಎಲ್ಸೆಸ್ಸೆಸ್, ಯುಎಸ್ಸೆಸ್ (CM KIDS SCHOLARSHIP LSS, USS) ಪರೀಕ್ಷಾ ಮಾರ್ಗದರ್ಶಿ ಪುಸ್ತಕದ ಬಿಡುಗಡೆ ಸಮಾರಂಭ ಕಾಸರಗೋಡಿನಲ್ಲಿ ನಡೆಯಿತು.
ಕಾಸರಗೋಡು ಜಿಲ್ಲಾ ಶಿಕ್ಷಣ ಉಪನಿರ್ದೇಶಕ ಇಬ್ರಾಹಿಂ ಬುಡ್ರಿಯ ಪುಸ್ತಕ ಬಿಡುಗಡೆಗೊಳಿಸಿದರು. ಕನ್ನಡ ಮಾಧ್ಯಮ ಅಧ್ಯಾಪಕ ಸಂಘದ ಕೇಂದ್ರ ಸಮಿತಿ ಅಧ್ಯಕ್ಷ ಸುಕೇಶ ಎ, ಪ್ರಧಾನ ಕಾರ್ಯದರ್ಶಿ ಪ್ರದೀಪ್ ಶೆಟ್ಟಿ ಬೇಳ, ಕೋಶಾಧಿಕಾರಿ ಶರತ್ ಕುಮಾರ್ ಯಂ, ಅಧಿಕೃತ ವಕ್ತಾರರಾದ ಬಾಬು ಕೆ ಉಪಸ್ಥಿತರಿದ್ದರು.


