HEALTH TIPS

'ಋಣಾನುಬಂಧ ಇದ್ದರೆ ಮಾತ್ರ ಕುತ್ತಿಕ್ಕಾರ್ ಕುಳೂರಿಗೆ ಬರಲು ಸಾಧ್ಯ' ; ಕುಳೂರು ಶಾಲಾ ವಾರ್ಷಿಕೋತ್ಸವದಲ್ಲಿ ಖ್ಯಾತ ಉದ್ಯಮಿ ಕೆ.ಕೆ.ಶೆಟ್ಟಿ ಕುತ್ತಿಕ್ಕಾರ್

ಮಂಜೇಶ್ವರ : ಕುಳೂರಿನ ಕಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಸಡಗರ ಸಂಭ್ರಮದಿಂದ ಜರಗಿತು. ಕೊಡುಗೈ ದಾನಿ ಕೆ.ಕೆ. ಶೆಟ್ಟಿ ಕುತ್ತಿಕ್ಕಾರ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿ, ಕುಳೂರು ಶಾಲೆಗೆ ಆಗಮಿಸಿದ್ದು ಋಣಾನುಬಂಧದಿಂದಲೇ ಆಗಿದೆ. ಸದಾಶಿವ ಶೆಟ್ಟಿಯವರಂತಹ ಶ್ರೇಷ್ಟರನ್ನು ಕೊಟ್ಟಂತಹ ಕುಳೂರು ಶಾಲೆಯು ಇನ್ನಷ್ಟು ಸರ್ವತೋಮುಖ ಅಭಿವೃದ್ಧಿಯನ್ನು ಕಾಣಲಿ ಎಂದು ಶುಭ ಹಾರೈಸಿದರು.  


ಶಾಲಾ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಜಯರಾಜ್ ಶೆಟ್ಟಿ ಚಾರ್ಲ ಧ್ವಜಾರೋಹಣಗೈಯುವ ಮೂಲಕ ಚಾಲನೆ ನೀಡಿದರು. ಮೀಂಜ ಗ್ರಾಮ ಪಂಚಾಯತಿ ಉಪಾಧ್ಯಕ್ಷೆ ಉಷಾ ಪೂಂಜ ಮಾಣೂರು ಉದ್ಘಾಟಿಸಿದರು. ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮೊಹಮ್ಮದ್ ಹಾಜಿ ಕಂಚಿಲ ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭದಲ್ಲಿ ಈ ಶೈಕ್ಷಣಿಕ ವರ್ಷದಲ್ಲಿ ಕರ್ನಾಟಕ ರಾಜ್ಯ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಶಾಲಾ ಹಳೆ ವಿದ್ಯಾರ್ಥಿ ಜಗದೀಶ್ ಶೆಟ್ಟಿ ಎಲಿಯಾಣ ಹಾಗೂ ಕುಳೂರು ಶಾಲೆಯ ಮಾಜಿ ಮುಖ್ಯ ಶಿಕ್ಷಕ, ಪ್ರಸ್ತುತ ಮಧೂರು ಶಾಲೆಯ ಮುಖ್ಯ ಶಿಕ್ಷಕರಾದ ವಿನೋದ್ ಕುಮಾರ್ ಬಿ.ಅವರನ್ನು ಗೌರವಿಸಿ ಸನ್ಮಾನಿಸಲಾಯಿತು. 

ಕಾಸರಗೋಡು ಜಿಲ್ಲಾ ಶಿಕ್ಷಣ ಉಪನಿರ್ದೇಶಕ ಇಬ್ರಾಹಿಂ ಬಿ, ಮಂಜೇಶ್ವರ ಉಪಜಿಲ್ಲಾ ವಿದ್ಯಾಧಿಕಾರಿ ಜಾರ್ಜ್ ಕ್ರಾಸ್ತ ಹಾಗೂ ಮಜಿಬೈಲ್ ಶಾಲಾ ಮುಖ್ಯ ಶಿಕ್ಷಕ ಸುರೇಶ್ ಬಂಗೇರ ಅವರನ್ನು ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಲಾಯಿತು. ಜೊತೆಗೆ ಶಾಲಾ ಹಳೆ ವಿದ್ಯಾರ್ಥಿ, ಇತ್ತೀಚೆಗೆ ಸೇವೆಯಿಂದ ನಿವೃತ್ತರಾದ ಸಬ್ ಇನ್ಸ್ಪೆಕ್ಟರ್ ಕೊರಗಪ್ಪ ಕುಳೂರು, ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಯ ವಿದ್ಯಾರ್ಥಿ ನಿಲಯಗಳಲ್ಲಿ ಮೇಲ್ವಿಚಾರಕರಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾದ ಮಾಧವ ಕೆ ಕುಳೂರು ಹಾಗೂ ಕಿನ್ನಿಗೋಳಿ ಮತ್ತು ಮೂಡಬಿದ್ರೆ ಶಾಲೆಗಳಲ್ಲಿ ದ್ವಿತೀಯ ದರ್ಜೆ ಸಹಾಯಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ರಾಮ ಕೆ ಕುಳೂರು ಇವರಿಗೆ ಗೌರವಾರ್ಪಣೆ ಮಾಡಲಾಯಿತು.

ಇತ್ತೀಚೆಗೆ ನಡೆದ ತ್ರಿಸ್ತರ ಪಂಚಾಯತಿ ಚುನಾವಣೆಯಲ್ಲಿ ವಿಜೇತರಾಗಿ ವಿವಿಧ ಸ್ಥಾನಗಳನ್ನು ಅಲಂಕರಿಸಿದ ಮೀಂಜ ಪಂಚಾಯತಿ ಉಪಾಧ್ಯಕ್ಷೆ ಹಾಗೂ ಶಾಲಾ ಹಳೆ ವಿದ್ಯಾರ್ಥಿ ಉಷಾ ಪೂಂಜ ಮಾಣೂರು, ಕುಳೂರು ವಾರ್ಡ್ ಸದಸ್ಯೆ ಶರ್ಮಿಳಾ ಎಂ ಶೆಟ್ಟಿ ಚಾರ್ಲ ಹಾಗೂ ಕಳೆದ ಐದು ವರ್ಷಗಳಲ್ಲಿ ಕುಳೂರು ವಾರ್ಡ್ ಸದಸ್ಯರಾಗಿ ಶಾಲೆಗೆ ಪಂಚಾಯತಿನಿಂದ ಹಲವು ಅನುದಾನಗಳನ್ನು ದೊರಕಿಸಿ ಕೊಡಲು ಸಹಕರಿಸಿರುವ ಶಾಲಾ ಹಳೆ ವಿದ್ಯಾರ್ಥಿ ಜನಾರ್ಧನ ಪೂಜಾರಿ ಕುಳೂರು ಅವರನ್ನು ಗೌರವ ಸ್ಮರಣಿಕೆ ನೀಡಿ ಅಭಿನಂದಿಸಲಾಯಿತು. ಶಾಲಾ ಶಿಕ್ಷಕಿಯರಾದ ನಯನ ಎಂ ಹಾಗೂ ಅಶ್ವಿನಿ ಎಂ ಸನ್ಮಾನ ಪತ್ರವನ್ನು ವಾಚಿಸಿದರು.

ಮೀಯಪದವು ವಿದ್ಯಾವರ್ಧಕ ಎ.ಯು.ಪಿ. ಶಾಲೆಯ ಮುಖ್ಯ ಶಿಕ್ಷಕ ಅರವಿಂದಾಕ್ಷ ಭಂಡಾರಿ, ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಚಂದ್ರಹಾಸ ಶೆಟ್ಟಿ ಕುಳೂರು ಕನ್ಯಾನ, ಶಾಲಾಭಿವೃದ್ಧಿ ಸಮಿತಿಯ ಸದಸ್ಯ ನಾರಾಯಣ ನಾೈಕ್ ನಡುಹಿತ್ಲು, ಶಾಲಾ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಜಯರಾಜ್ ಶೆಟ್ಟಿ ಚಾರ್ಲ, ಮಾತೃ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ಕವಿತಾ ದೇರಂಬಳ, ಪ್ರೀ ಪ್ರೈಮರಿ ವಿಭಾಗದ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ಪ್ರಿಯಾಂಕ ಕೇಮಜಾಲು ಉಪಸ್ಥಿತರಿದ್ದರು.

ಮುಖ್ಯ ಶಿಕ್ಷಕಿ ಮಾಲತಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಹಳೆ ವಿದ್ಯಾರ್ಥಿ ಸಂಘದ ಜೊತೆಕಾರ್ಯದರ್ಶಿ ಶಶಿಕುಮಾರ್ ಕುಳೂರು ಸ್ವಾಗತಿಸಿ, ಶಿಕ್ಷಕಿ ಸೌಮ್ಯ ಪಿ. ವಂದಿಸಿದರು. ಶಾಲಾ ಶಿಕ್ಷಕ ಜಯಪ್ರಶಾಂತ್ ಪಾಲೆಂಗ್ರಿ ಕಾರ್ಯಕ್ರಮ ನಿರೂಪಿಸಿದರು. 

ಬಳಿಕ ಶಾಲಾ ಮಕ್ಕಳು, ಸ್ಥಳೀಯ ಅಂಗನವಾಡಿ ಪುಟಾಣಿಗಳು, ಹಳೆ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳು ಜರಗಿದವು. ಶಾಲಾ ಮಕ್ಕಳಿಂದ ಕಿರು ನಾಟಕ 'ಚಿನ್ನದ ಮಾಲೆ, ಶಾಲಾ ರಕ್ಷಕ-ಶಿಕ್ಷಕ ಸಂಘದ ಸದಸ್ಯೆಯರಿಂದ ತುಳು ಕಿರು ನಾಟಕ 'ಕತ್ತಲೆ ಮಾಜಿಂಡ್' ಹಾಗೂ ನವಯುವಕ ಕಲಾವಿದೆರ್ ಚಿನಾಲ ಇವರಿಂದ ತುಳು ಸಾಮಜಿಕ ಹಾಸ್ಯ ನಾಟಕ 'ಕಡೀರ ಮಗೆ' ಪ್ರದರ್ಶನಗೊಂಡು ಮೆಚ್ಚುಗೆಗೆ ಪಾತ್ರವಾಯಿತು. ಶಾಲಾ ರಕ್ಷಕ-ಶಿಕ್ಷಕ ಸಂಘದ ಸದಸ್ಯರು ಹಾಗೂ ಹಳೆ ವಿದ್ಯಾರ್ಥಿ ಸಂಘದ ಸದಸ್ಯರು ಉಪಸ್ಥಿತರಿದ್ದು ಸಹಕರಿಸಿದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries