HEALTH TIPS

ಸರೋವರ ಕ್ಷೇತ್ರ ಅನಂತಪದ್ಮನಾಭ ಸ್ವಾಮಿ ಕ್ಷೇತ್ರ ವಾರ್ಷಿಕ ಜಾತ್ರೆ-ಆಮಂತ್ರಣ ಪತ್ರಿಕೆ ಬಿಡುಗಡೆ

ಕುಂಬಳೆ: ಸರೋವರ ಕ್ಷೇತ್ರ, ಅನಂತಪುರ ಶ್ರೀ ಅನಂತ ಪದ್ಮನಾಭ ಸ್ವಾಮಿ ದೇವಸ್ಥಾನದ ವಾರ್ಷಿಕ ಜಾತ್ರೆಯ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ದೇವಸ್ಥಾನ ಸಭಾಂಗಣದಲ್ಲಿ ಜರುಗಿತು.   ಎಡನಾಡು ಸಹಕಾರಿ ಬ್ಯಾಂಕ್ ಅಧ್ಯಕ್ಷರು ಶ್ಯಾಮರಾಜ್ ಆಮಂತ್ರಣಪತ್ರಿಕೆಯನ್ನು ಉತ್ಸವ ಸಮಿತಿ ಅಧ್ಯಕ್ಷ ಗೋಪಾಲಕೃಷ್ಣ ಪೆರ್ನೆ ಅವರಿಗೆ ಹಸ್ತಾಂತರಿಸುವ ಮೂಲಕ ಬಿಡುಗಡೆಗೊಳಿಸಿದರು.  

ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿ ಮಹಾಲಿಂಗೇಶ್ವರ ಭಟ್, ಉತ್ಸವ ಸಮಿತಿ ಕಾರ್ಯದರ್ಶಿ ರತ್ನಕರ, ಸದಸ್ಯರಾದ ಅನಿಲ್, ಸ್ವಾತಿಕ್, ಸತ್ಯಶಂಕರ, ಗಣೇಶ್, ಕಿಶೋರ್, ಪ್ರಶಾಂತ್, ನಾರಾಯಣ ಭಟ್ ಉಪಸ್ಥಿತರಿದ್ದರು. ವಾರ್ಷಿಕ ಜಾತ್ರಾ ಮಹೋತ್ಸವ ಕ್ಷೇತ್ರದ ತಂತ್ರಿ ಶ್ರೀ ದೇಲಂಪಾಡಿ ಗಣೇಶ್ ತಂತ್ರಿಗಳ ನೇತೃತ್ವದಲ್ಲಿ  ಪೆಬ್ರುವಾರಿ 26ರಂದು ನಡೆಯಲಿದೆ. 



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries