HEALTH TIPS

ಬಿಜೆಪಿಯನ್ನು ಆರ್‌ಎಸ್‌ಎಸ್‌ ನಿಯಂತ್ರಿಸುತ್ತಿಲ್ಲ: ಮೋಹನ್ ಭಾಗವತ್

ಲಖನೌ: ರಾಷ್ಟ್ರೀಯ ಸ್ವಯಂ ಸೇವಕ ಸಂಘವು (ಆರ್‌ಎಸ್‌ಎಸ್‌) ಬಿಜೆಪಿಯನ್ನು ರಿಮೋಟ್ ಕಂಟ್ರೋಲ್ ಮಾಡುತ್ತಿಲ್ಲ ಎಂದು ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅವರು ಬುಧವಾರ ಹೇಳಿದ್ದಾರೆ.

ಭಾರತದಲ್ಲಿ ವಾಸಿಸುವವರೆಲ್ಲರೂ ಹಿಂದೂಗಳೇ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

ಹೀಗಿದ್ದರೂ, ಬಿಜೆಪಿಯನ್ನು ವಿರೋಧಿಸುವವರು ಆರ್‌ಎಸ್‌ಎಸ್‌ ಅನ್ನೂ ವಿರೋಧಿಸುತ್ತಾರೆ ಎಂದಿದ್ದಾರೆ.

ಇಲ್ಲಿ ನಡೆದ ಸಭೆಯೊಂದರಲ್ಲಿ ಮಾತನಾಡಿದ ಅವರು, ಸಂಘದ ಸ್ವಯಂ ಸೇವಕರು ಬಿಜೆಪಿಗೆ ಸೇರಿ ಅಲ್ಲಿನ ಪ್ರಮುಖ ಹುದ್ದೆಗಳಲ್ಲಿ ಇದ್ದಾರೆ. ಆದರೆ ಬಿಜೆಪಿಯನ್ನು ಆರ್‌ಎಸ್‌ಎಸ್‌ ನಿಯಂತ್ರಿಸುತ್ತದೆ ಎನ್ನುವುದು ತಪ್ಪಾಗುತ್ತದೆ ಎಂದು ಹೇಳಿದ್ದಾರೆ.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತದ ಮೇಲೆ ಹೇರಿದ ತೆರಿಗೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, 'ಅಮೆರಿಕವು ಆರ್ಥಿಕ ಹಾಗೂ ಸೇನಾ ಬಲವನ್ನು ಬಳಸಿ ಭಾರತವನ್ನು ಮಂಡಿಯೂರಿಸಲು ಪ್ರಯತ್ನಿಸುತ್ತಿದ್ದಾರೆ, ಆದರೆ ಭಾರತ ಬಲಿಷ್ಠವಾಗಿದೆ' ಎಂದರು.

ಉತ್ತರ ಪ್ರದೇಶ ಪ್ರಸ್ತುತ ರಾಜಕೀಯ ಸನ್ನಿವೇಶಗಳ ಬಗ್ಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಜೊತೆಗೆ ಭಾಗವತ್ ಚರ್ಚಿಸಿದ್ದಾರೆ ಎನ್ನಲಾಗಿದೆ. ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆ ಬಗ್ಗೆಯೂ ಮಾತುಕತೆ ನಡೆದಿದೆ ಎಂದು ಗೊತ್ತಾಗಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries