ಕಾಸರಗೋಡು: ಜಿಲ್ಲೆಯಲ್ಲಿ ಮಹಾಶಿವರಾತ್ರಿ ಅಂಗವಾಗಿ ವಿವಿಧ ಶಿವಾಲಯಗಳಲ್ಲಿ ವಿಶೇಷ ಪೂಜೆ, ಅಭಿಷೇಕ ನಡೆಯಿತು. ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನ, ಕಾಸರಗೋಡು ಶ್ರೀ ಮಲ್ಲಿಕಾರ್ಜುನ ದೇವಸ್ಥಾನ, ತ್ರಿಕ್ಕನ್ನಾಡು ತ್ರಯಂಬಕೇಶ್ವರ ದೇವಸ್ಥಾನ, ಏತಡ್ಕ ಶ್ರೀ ಸದಾಶಿವ ದೇವಸ್ಥಾನ, ಶಿರಿಯ ಶ್ರೀ ಶಂಕರನಾರಾಯಣ ದೇವಾಲಯ, ವರ್ಕಾಡಿ ಪಾತೂರು ಶ್ರೀ ಸೂರ್ಯೇಶ್ವರ ದೇವಸ್ಥಾನ, ಪುತ್ತಿಗೆ ದೇಲಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಬಜಕೂಡ್ಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಪರಕ್ಕಿಲ ಶ್ರೀ ಮಹಾದೇವ ಶಾಸ್ತಾವಿನಾಯಕ ದೇವಸ್ಥಾನ ಸೇರಿದಂತೆ ವಿವಿಧ ಶಿವಾಲಯಗಳಲ್ಲಿ ವಿಶೇಷ ಅಭಿಷೇಕ, ಪೂಜೆ ನಡೆಯಿತು.
ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಅಂಗವಾಗಿ ವಿಶೇಷ ಅಭಿಷೇಕ, ಉದಯಾಸ್ತಮಾನ ಪೂಜೆ ನಡೆಯಿತು. ಕಾಸರಗೋಡು ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಬೆಳಗ್ಗಿಂದ ಸಂಜೆವರೆಗೆ ಉದಯಾಸ್ತಮಾನ ಭಜನಾರ್ಚನೆ ನೆರವೇರಿತು. ಇದೇ ಸಂದರ್ಭ ಕಾಸರಗೋಡು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ನೇತೃತ್ವದಲ್ಲಿ ಸಾಮೂಹಿಕ ಶಿವ ಪಂಚಾಕ್ಷರಿ ಮಂತ್ರ ಪಾರಾಯಣ ಆಯೋಜಿಸಲಾಯಿತು.ವಿಜಯವಾಣಿ ಸುದ್ದಿಜಾಲ ಕಾಸರಗೋಡು
ಪೆರ್ಲ ಸನಿಹದ ಬಜಕೂಡ್ಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶತರುದ್ರಾಭಿಷೇಕ ಮತ್ತು ಬಲಿವಾಡುಕೂಟ, ಶ್ರೀ ಮಹಾಲಿಂಗೇಶ್ವರ ಭಜನಾ ಸಂಘದ ವತಿಯಿಂದ ಶಿವರಾತ್ರಿ ಭಜನೆ ನಡೆಯಿತು.
ಶಿವರಾತ್ರಿ ಅಂಗವಾಗಿ ಕಾಸರಗೋಡು ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿಉದಯಾಸ್ತಮಾನ ಭಜನಾರ್ಚನೆ ನೆರವೇರಿತು.


