HEALTH TIPS

ಬಾಂಗ್ಲಾದ ನೂತನ ಪ್ರಧಾನಿಯಾಗಿ ತಾರಿಕ್ ಪ್ರಮಾಣ; ಭಾರತದಿಂದ ಓಂ ಬಿರ್ಲಾ ಭಾಗಿ

ಢಾಕಾ: ಸಾರ್ವತ್ರಿಕ ಚುನಾವಣೆಯಲ್ಲಿ ಐತಿಹಾಸಿಕ ಗೆಲುವು ಸಾಧಿಸಿದ ಐದು ದಿನಗಳ ನಂತರ ಬಾಂಗ್ಲಾದೇಶ ನ್ಯಾಷನಲಿಸ್ಟ್‌ ಪಾರ್ಟಿಯ (ಬಿಎನ್‌ಪಿ) ಅಧ್ಯಕ್ಷ ತಾರಿಕ್ ರೆಹಮಾನ್ ಅವರು ನೂತನ ಪ್ರಧಾನಿಯಾಗಿ ಮಂಗಳವಾರ ಪ್ರಮಾಣವಚನ ಸ್ವೀಕರಿಸಿದ್ದಾರೆ. 

ಅಧ್ಯಕ್ಷರ ಭವನ ಬಂಗಾಬಾನ್ ಬದಲಿಗೆ ಸಂಸತ್ ಭವನದ ದಕ್ಷಿಣ ಪ್ಲಾಜಾದಲ್ಲಿ 60 ವರ್ಷದ ತಾರಿಕ್ ರೆಹಮಾನ್ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಿತು.

ಈ ಮೂಲಕ ದೇಶದ ಇತಿಹಾಸದಲ್ಲಿ 35 ವರ್ಷಗಳ ಬಳಿಕ ಮೊದಲ ಬಾರಿಗೆ ಪುರುಷರೊಬ್ಬರು ಪ್ರಧಾನಿಯಾಗಿದ್ದಾರೆ.

ಅಧ್ಯಕ್ಷ ಮೊಹಮ್ಮದ್‌ ಶಹಾಬುದ್ದೀನ್ ಅವರು ನೂತನ ಸಚಿವ ಸಂಪುಟದ ಸದಸ್ಯರಿಗೆ ಪ್ರಮಾಣವಚನ ಬೋಧಿಸಿದ್ದಾರೆ. ಸಮಾರಂಭದಲ್ಲಿ ಭಾರತದ ಪ್ರತಿನಿಧಿಯಾಗಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಭಾಗವಹಿಸಿದ್ದರು.

ಇದಕ್ಕೂ ಮುನ್ನ ಇಂದು ಬೆಳಿಗ್ಗೆ 11.30ಕ್ಕೆ ಸಂಸತ್ ಭವನದಲ್ಲಿ ಬಿಎನ್‌ಪಿ ಸಂಸದೀಯ ಪಕ್ಷದ ಸಭೆ ನಡೆಯಿತು. ಈ ಸಭೆಯಲ್ಲಿ ಪಕ್ಷದ ಅಧ್ಯಕ್ಷ ತಾರಿಕ್ ರೆಹಮಾನ್ ಅವರು ಪ್ರಧಾನಿಯಾಗಿ ಆಯ್ಕೆಯಾದರು ಎಂದು ಪಕ್ಷದ ಸ್ಥಾಯಿ ಸಮಿತಿ ಸದಸ್ಯ ಸಲಾಹುದ್ದೀನ್‌ ಅಹ್ಮದ್‌ ಹೇಳಿದ್ದಾರೆ.

ಫೆಬ್ರುವರಿ 12ರಂದು ನಡೆದ ನಿರ್ಣಾಯಕ 13ನೇ ಸಂಸತ್ ಚುನಾವಣೆಯಲ್ಲಿ ತಾರಿಕ್‌ ರೆಹಮಾನ್‌ ಅವರ ನೇತೃತ್ವದ ಬಾಂಗ್ಲಾದೇಶದ ನ್ಯಾಷನಲಿಸ್ಟ್‌ ಪಾರ್ಟಿ (ಬಿಎನ್‌ಪಿ) 297 ಸ್ಥಾನಗಳಲ್ಲಿ 212 ಸ್ಥಾನಗಳನ್ನು ಗೆದ್ದುಕೊಂಡಿತ್ತು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries