ಇಂಫಾಲ್: ಮಣಿಪುರದ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ವೈ. ಖೇಮ್‌ಚಂದ್ ಸಿಂಗ್ ಅವರನ್ನು ಆಯ್ಕೆ ಮಾಡಲಾಗಿದ್ದು, ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ವರದಿಯಾಗಿದೆ.
ದೆಹಲಿಯಲ್ಲಿ ಮಂಗಳವಾರ ನಡೆದ ಮಣಿಪುರ ಶಾಸಕಾಂಗ ಪಕ್ಷದ ಸಭೆಯಲ್ಲಿ ಖೇಮ್‌ಚಂದ್ ಸಿಂಗ್ ಅವರನ್ನು ಬಿಜೆಪಿ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಯಿತು.
ಮಣಿಪುರದಲ್ಲಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಗಾಗಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್ ಅವರನ್ನು ಕೇಂದ್ರ ವೀಕ್ಷಕರನ್ನಾಗಿ ಬಿಜೆಪಿ ಸಂಸದೀಯ ಮಂಡಳಿ ಸೋಮವಾರ ನೇಮಿಸಿತ್ತು.
ಮೈತೇಯಿ ಮತ್ತು ಕುಕಿ ಸಮುದಾಯಗಳ ನಡುವಿನ ಜನಾಂಗೀಯ ಹಿಂಸಾಚಾರದ ನಂತರ ಮಣಿಪುರದಲ್ಲಿ 2025ರ ಫೆಬ್ರುವರಿಯಿಂದ ರಾಷ್ಟ್ರಪತಿ ಆಳ್ವಿಕೆ ಜಾರಿಯಲ್ಲಿದೆ.

