HEALTH TIPS

ತೈಲ ಖರೀದಿಸುವುದನ್ನು ನಿಲ್ಲಿಸುವ ಬಗ್ಗೆ ಭಾರತ ಯಾವುದೇ ಮಾಹಿತಿ ನೀಡಿಲ್ಲ: ರಷ್ಯಾ

ಮಾಸ್ಕೊ: ತೈಲ ಖರೀದಿಸುವುದನ್ನು ನಿಲ್ಲಿಸುವ ಬಗ್ಗೆ ಭಾರತದಿಂದ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ ಎಂದು ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರ ವಕ್ತಾರ ಡಿಮಿಟ್ರಿ ಪೆಸ್ಕೋವ್ ತಿಳಿಸಿದ್ದಾರೆ. 

'ಭಾರತವು ರಷ್ಯಾದಿಂದ ತೈಲ ಖರೀದಿಸುವುದನ್ನು ನಿಲ್ಲಿಸಲು ಮತ್ತು ವೆನೆಜುವೆಲಾದಿಂದ ಹೆಚ್ಚಿನ ತೈಲ ಖರೀದಿಸಲು ಒಪ್ಪಿಕೊಂಡಿದೆ.

ಅದಕ್ಕೆ ಪ್ರತಿಯಾಗಿ ಅಮೆರಿಕವು ಪ್ರತಿಸುಂಕವನ್ನು ಪ್ರಸ್ತುತ ಶೇಕಡ 50ರಿಂದ ಶೇ 18ಕ್ಕೆ ಇಳಿಸಲಿದೆ' ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೋಮವಾರ ಹೇಳಿದ್ದರು.

'ಭಾರತದೊಂದಿಗಿನ ಸಂಬಂಧಗಳ ಕುರಿತಾದ ಟ್ರಂಪ್ ಅವರ ಹೇಳಿಕೆಗಳನ್ನು ರಷ್ಯಾ ಎಚ್ಚರಿಕೆಯಿಂದ ವಿಶ್ಲೇಷಿಸುತ್ತಿದೆ' ಎಂದು ಡಿಮಿಟ್ರಿ ಪೆಸ್ಕೋವ್ ಹೇಳಿದ್ದಾರೆ.

'ಭಾರತವು ರಷ್ಯಾದಿಂದ ತೈಲ ಖರೀದಿಸುವುದನ್ನು ನಿಲ್ಲಿಸಲು ನಿರ್ಧರಿಸಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, 'ಈ ಕ್ಷಣದವರೆಗೆ ಭಾರತದಿಂದ ಅಂತಹ ಯಾವುದೇ ಮಾಹಿತಿ ಬಂದಿಲ್ಲ' ಎಂದಿದ್ದಾರೆ.

'ನಾವು ಭಾರತ-ಅಮೆರಿಕದ ನಡುವಿನ ದ್ವಿಪಕ್ಷೀಯ ಸಂಬಂಧಗಳನ್ನು ಗೌರವಿಸುತ್ತೇವೆ. ಆದರೆ, ರಷ್ಯಾ ಮತ್ತು ಭಾರತದ ನಡುವಿನ ಮುಂದುವರಿದ ಕಾರ್ಯತಂತ್ರದ ಪಾಲುದಾರಿಕೆಯ ಪ್ರಾಮುಖ್ಯತೆಯನ್ನು ಕಡಿಮೆ ಮಾಡುವುದಿಲ್ಲ. ಇದು ನಮಗೆ ಅತ್ಯಂತ ಮುಖ್ಯವಾದ ವಿಷಯವಾಗಿದೆ. ಭಾರತ ಮತ್ತು ರಷ್ಯಾದೊಂದಿಗಿನ ದ್ವಿಪಕ್ಷೀಯ ಸಂಬಂಧಗಳನ್ನು ಮತ್ತಷ್ಟು ಬಲಪಡಿಸಲು ಉದ್ದೇಶಿಸಿದ್ದೇವೆ' ಎಂದೂ ಅವರು ಸ್ಪಷ್ಟಪಡಿಸಿದ್ದಾರೆ.

2022ರಲ್ಲಿ ಉಕ್ರೇನ್‌ ಮತ್ತು ರಷ್ಯಾ ನಡುವೆ ಯುದ್ಧ ಆರಂಭವಾದ ಬಳಿಕ ಭಾರತವು ರಿಯಾಯಿತಿ ದರದಲ್ಲಿ ರಷ್ಯಾದಿಂದ ಕಚ್ಚಾ ತೈಲವನ್ನು ಖರೀದಿಸುತ್ತಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries