HEALTH TIPS

ರಾಜ್ಯದಲ್ಲಿ ಸಮಗ್ರ ಬದಲಾವಣೆಗೆ ಬಿಜೆಪಿ ಗೆಲುವು ಅನಿವಾರ್ಯ-ಎಂ.ಎಲ್ ಅಶ್ವಿನಿ

ಕಾಸರಗೋಡು: ಅಭಿವೃದ್ಧಿ ಕುಂಠಿತ, ನಿರುದ್ಯೋಗ ಸಮಸ್ಯೆ ಮತ್ತು ಆರ್ಥಿಕ ಬಿಕ್ಕಟ್ಟಿನಿಂದ ರಾಜ್ಯವನ್ನು ಪಾರು ಮಾಡುವುದರ ಜತೆಗೆ ರಾಜ್ಯ ರಾಜಕೀಯದಲ್ಲಿನ ಬದಲಾವಣೆಗೆ ಬಿಜೆಪಿ ಗೆಲುವು ಅನಿವಾರ್ಯ ಎಂಬುದಾಗಿ ಬಿಜೆಪಿ ಜಿಲ್ಲಾಧ್ಯಕ್ಷೆ ಎಂ.ಎಲ್ ಅಶ್ವಿನಿ ತಿಳಿಸಿದ್ದಾರೆ.

ಅವರು ಸ್ಥಳೀಯಾಡಳಿತ ಚುನಾವಣೆಯಲ್ಲಿ ವಿಜೇತರಾದ ಬಿಜೆಪಿಯ ಚುನಾಯಿತ ಪ್ರತಿನಿಧಿಗಳಿಗೆ ಪಕ್ಷದ ವತಿಯಿಂದ ಕಾಸರಗೋಡು ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ನಡೆದ ತರಬೇತಿ ಕಾರ್ಯಕ್ರಮ  ಉದ್ಘಾಟಿಸಿ ಮಾತನಾಡಿದರು.  

ಕೇರಳದ ಚುನಾಯಿತ ಜನಪ್ರತಿನಿಧಿಗಳ ಮೇಲೆ ಬಿಜೆಪಿ ಕೇಂದ್ರ ನೇತೃತ್ವ ಭರವಸೆ ಇರಿಸಿಕೊಂಡಿದೆ. ಆ ಭರವಸೆ ಹುಸಿಯಾಗದಂತೆ ಪ್ರತಿಯೊಬ್ಬ ಜನಪ್ರತಿನಿಧಿ ಕೇಂದ್ರಾವಿಷ್ಕøತ ಯೋಜನೆಗಳನ್ನು ಜನತೆಗೆ ತಲುಪಿಸಲು ಪ್ರಯತ್ನಿಸಬೇಕು.  ರಾಜ್ಯದ ಜನಪ್ರತಿನಿಧಿಗಳ ಮಲೆ ಬಿಜೆಪಿ ರಾಷ್ಟ್ರೀಯ ನಾಯಕತ್ವ ಮತ್ತು ನರೇಂದ್ರ ಮೋದಿ ಇರಿಸಿರುವ ಭರವಸೆಯನ್ನು ಸುಳ್ಳಾಗಿಸದಂತೆ ನಡೆಸಿಕೊಡುವುದು ನಮ್ಮೆಲ್ಲರ ಕರ್ತವ್ಯವಾಗಬೇಕು ಎಂದು ತಿಳಿಸಿದರು.

ಬಿಜೆಪಿ ರಾಜ್ಯ ಕೌನ್ಸಿಲ್ ಸದಸ್ಯೆ ಪ್ರಮೀಳಾ ಸಿ ನಾಯ್ಕ್ ಅಧ್ಯಕ್ಷತೆ ವಹಿಸಿದ್ದರು. 

 ಬಿಜೆಪಿ ಕೋಯಿಕ್ಕೋಡ್ ವಲಯ ಕಾರ್ಯದರ್ಶಿ ಸುಧಾಮ ಗೋಸಾಡ, ರಾಜ್ಯ ಸಮಿತಿ ಸದಸ್ಯ ರಾಮಪ್ಪ ಮಂಜೇಶ್ವರ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ. ಆರ್. ಸುನಿಲ್, ಜಿಲ್ಲಾ ಉಪಾಧ್ಯಕ್ಷೆ ಎಚ್. ಆರ್ ಸುಕನ್ಯ, ಜಿಲ್ಲಾ ಕಾರ್ಯದರ್ಶಿಗಳಾದ ಪುಷ್ಪಾ ಗೋಪಾಲನ್, ಮಹೇಶ್ ಗೋಪಾಲ್, ಅಶ್ವಿನಿ ಕೆ. ಎಂ, ಪ್ರಮೀಳಾ ಮಜಲ್, ಬದಿಯಡ್ಕ ಗ್ರಾ. ಪಂ. ಅಧ್ಯಕ್ಷ ಡಿ. ಶಂಕರ, ಮಧೂರು ಗ್ರಾ. ಪಂ. ಅಧ್ಯಕ್ಷೆ ಸುಜ್ಞಾನಿ ಶ್ಯಾನುಭೋಗ್ ಮೊದಲಾದವರು ಉಪಸ್ಥಿತರಿದ್ದರು.

ನೂತನ ಜನಪ್ರತಿನಿಧಿಗಳಿಗೆ ಬಿಜೆಪಿ ರಾಜ್ಯ ಕಾರ್ಯದರ್ಶಿಗಳಾದ ಅಶೋಕನ್ ಕುಳನಾಡ್ ಹಾಗೂ ಕೆ. ರಂಜಿತ್ ತರಗತಿಗಳನ್ನು ನಡೆಸಿದರು. 



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries