ಪೆರ್ಲ: ಇಡಿಯಡ್ಕ ಶ್ರೀ ದುರ್ಗಾಪರಮೇಶ್ವರೀ(ಉಳ್ಳಾಲ್ತೀ)ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ ಅಂಗವಾಗಿ ಶ್ರೀ ಉಳ್ಳಾಲ್ತೀ ದೈವದ ನೇಮ ಭಕ್ತಿ, ಸಂಭ್ರಮದಿಂದ ನೆರವೇರಿತು. ಬ್ರಹ್ಮಶ್ರೀ ವಾಸುದೇವ ತಂತ್ರಿ ಕುಂಟಾರು ಹಾಗೂ ಬ್ರಹ್ಮಶ್ರೀ ರವೀಶ ತಂತ್ರಿ ಕುಂಟಾರು ಅವರ ನೇತೃತ್ವದಲ್ಲಿ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದ ಅಂಗವಾಗಿ ಆಯೋಜಿಸಲಾದ ಕಜಂಬು ಉತ್ಸವದಲ್ಲಿ ದೇವಾಲಯದ ಸನಿಹದಲ್ಲಿರುವ ಶಂಖತೀರ್ಥದಲ್ಲಿ ನೂರಕ್ಕೂ ಹೆಚ್ಚು ಮಂದಿ ಮಕ್ಕಳಿಗೆ ಪುಣ್ಯಸ್ನಾನ ಮಾಡಿಸಲಾಯಿತು. ಶ್ರೀ ಉಳ್ಳಾಲ್ತಿ ನೇಮ ವೀಕ್ಷಣೆಗಾಗಿ ಕಾಸರಗೋಡು ಹಾಗೂ ದ.ಕ ಜಿಲ್ಲೆಯ ವಿವಿಧೆಡೆಯಿಂದ ಭಕ್ತಾದಿಗಳು ಆಗಮಿಸಿದ್ದರು.
5ರಂದು ನಡೆಯಲಿರುವ ಶ್ರೀ ವಿಷ್ಣುಮೂರ್ತಿ ದೈವದ ಕೋಲದ ಹಿನ್ನೆಲೆಯಲ್ಲಿ ಬುಧವಾರ ಶ್ರೀದೈವದ ತೊಡಙಳ್, ಶ್ರೀ ವಿಷ್ಣುಮೂರ್ತಿ ದೈವದ ಕುಳಿಚ್ಚಾಟ ನಡೆಯಿತು. ಫೆ. 5ರಂದು ಬೆಳಗ್ಗೆ 10ಕ್ಕೆ ಶ್ರೀ ವಷ್ಣುಮೂರ್ತಿ ದೈವದ ಕೋಲ, ಮಧ್ಯಾಹ್ನ 12.30ಕ್ಕೆ ಧ್ವಜಾವರೋಹಣದೊಂದಿಗೆ ಜಾತ್ರಾ ಮಹೋತ್ಸವ ಸಂಪನ್ನಗೊಳ್ಳುವುದು.


