HEALTH TIPS

ಮಾಜಿ ಸಚಿವರ ಮೇಲೆ ಗುಂಡು ಹಾರಿಸಲು ಯತ್ನ: ಅದೃಷ್ಟವಶಾತ್ ಪಾರದ ಸಮಾಜವಾದಿ ನಾಯಕ

ಲಖನೌ: ಉತ್ತರ ಪ್ರದೇಶದ ಮಾಜಿ ಸಚಿವ ಹಾಗೂ ಸಮಾಜವಾದಿ ಪಕ್ಷದ ನಾಯಕ ಮದನ್ ಚೌಹಾಣ್ ಅವರ ಹತ್ಯೆಗೆ ಯತ್ನ ನಡೆದಿದ್ದು, ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಕಾರಿನಲ್ಲಿ ಬಂದ ಯುವಕರ ಗುಂಪು ಗುಂಡು ಹಾರಿಸಲು ಪ್ರಯತ್ನಿಸಿದೆ.

ಆದರೆ ಅವರ ಬಂದೂಕಿನಿಂದ ಗುಂಡು ಹಾರದಿರುವುದರಿಂದ ಯತ್ನ ವಿಫಲವಾಗಿದೆ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಚೌಹಾಣ್ ಅವರು ಸಂಬಂಧಿಕರ ನಿಶ್ಚಿತಾರ್ಥ ಸಮಾರಂಭದಲ್ಲಿ ಪಾಲ್ಗೊಳ್ಳಲು ಕಾರಿನಲ್ಲಿ ತೆರಳುತ್ತಿದ್ದಾಗ, ಸೋಮವಾರ ರಾತ್ರಿ ಗರ್ಮುಕ್ತೇಶ್ವರ ಪ್ರದೇಶದಲ್ಲಿ ಈ ಘಟನೆ ನಡೆದಿದೆ.

ಈ ಕುರಿತು ಮಾಹಿತಿ ಹಂಚಿಕೊಂಡಿರುವ ಚೌಹಾಣ್, ಮುಖ್ಯ ರಸ್ತೆಯಿಂದ ಗ್ರಾಮದ ರಸ್ತೆಗೆ ಪ್ರವೇಶಿಸುತ್ತಿದ್ದಂತೆ, ಕಾರಿನಲ್ಲಿ ಬಂದ ಕೆಲವು ಯುವಕರು ತಮ್ಮ ವಾಹನವನ್ನು ಅಡ್ಡಹಾಕಿದರು. ಅದರಲ್ಲಿ ಓರ್ವ ಪಿಸ್ತೂಲ್ ತೆಗೆದು ಗುಂಡು ಹಾರಿಸಲು ಯತ್ನಿಸಿದನು. ಆದರೆ, ಗುಂಡು ಹಾರಲಿಲ್ಲ ಎಂದು ತಿಳಿಸಿದ್ದಾರೆ.

ಕೂಡಲೇ ಅವರ ಭದ್ರತಾ ಸಿಬ್ಬಂದಿ ದಾಳಿಕೋರರನ್ನು ಹಿಡಿಯಲು ಪ್ರಯತ್ನಿಸಿದರು. ಆದರೆ, ಹಂತಕರ ಗುಂಪು ಸ್ಥಳದಿಂದ ಪರಾರಿಯಾಯಿತು ಎಂದು ತಿಳಿಸಿದ್ದಾರೆ.

ಚೌಹಾಣ್ ನೀಡಿದ ದೂರಿನ ಆಧಾರದ ಮೇಲೆ, ಎಫ್‌ಐಆರ್ ದಾಖಲಿಸಿಕೊಂಡಿರುವ ಪೊಲೀಸರು, ತನಿಖೆ ಚುರುಕುಗೊಳಿಸಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವಿನೀತ್ ಭಟ್ನಾಗರ್ ಹೇಳಿದ್ದಾರೆ. ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries