ಪ್ಯೋಂಗ್ಯಾಂಗ್, ಮಾ.12: ಉತ್ತರ ಕೊರಿಯಾದ ಅಧ್ಯಕ್ಷ ಕಿಮ್ ಜಾಂಗ್ ಉನ್ ತನ್ನ ಹದಿಹರೆಯದ ಪುತ್ರಿ ಕಿಮ್ ಜು ಏ ಅವರನ್ನು ಉತ್ತರಾಧಿಕಾರಿಯನ್ನಾಗಿ ಆಯ್ಕೆ ಮಾಡಿರುವುದಾಗಿ ದಕ್ಷಿಣ ಕೊರಿಯಾದ ಗುಪ್ತಚರ ಇಲಾಖೆ ಗುರುವಾರ ಮಾಹಿತಿ ನೀಡಿದೆ.
ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ 13 ವರ್ಷದ ಕಿಮ್ ಜು ಅವರ ಉಪಸ್ಥಿತಿ ಹೆಚ್ಚಾಗಿ ಗಮನ ಸೆಳೆಯುತ್ತಿತ್ತು.
ತಂದೆ ಭಾಗವಹಿಸುತ್ತಿದ್ದ ಪ್ರಮುಖ ಕಾರ್ಯಕ್ರಮಗಳಲ್ಲಿ ಕಿಮ್ ಜು ಅವರೂ ಜತೆಯಲ್ಲಿ ಕಾಣಿಸಿಕೊಳ್ಳುತ್ತಿದ್ದರು. ಸೆಪ್ಟಂಬರ್‌ನಲ್ಲಿ ಕಿಮ್ ಜು ಚೀನಾಕ್ಕೆ ಭೇಟಿ ನೀಡಿದ್ದರು ಎಂದು ಮೂಲಗಳನ್ನು ಉಲ್ಲೇಖಿಸಿ ಬಿಬಿಸಿ ವರದಿ ಮಾಡಿದೆ.ಅದರ

