ನಾಗ್ಪುರ : ಲಂಡನ್‌ನಿಂದ ಹೈದರಾಬಾದ್‌ಗೆ ಹೊರಟಿದ್ದ ಬ್ರಿಟಿಷ್ ಏರ್‌ವೇಸ್ ವಿಮಾನವು ಪ್ರತಿಕೂಲ ಹವಾಮಾನದ ಕಾರಣದಿಂದ ನಾಗ್ಪುರ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಇಳಿಯಿತು ಎಂದು ಅಧಿಕಾರಿಯೊಬ್ಬರು ತಿಳಿಸಿದರು.ವಿಮಾನದಲ್ಲಿದ್ದ ಎಲ್ಲ ಪ್ರಯಾಣಿಕರನ್ನು ಕೆಳಗಿಳಿಸಲಾಗಿದೆ.
ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಕಾರಣ ವಿಮಾನವು ನಾಗ್ಪುರ ನಿಲ್ದಾಣದಲ್ಲಿಯೇ ಇದೆ ಎಂದು ಹೇಳಿದರು.
ಅಸ್ಪಷ್ಟ ಗೋಚರತೆ ಮತ್ತು ಪ್ರತಿಕೂಲ ಹವಾಮಾನದಿಂದ ವಿಮಾನವು ಬೆಳಿಗ್ಗೆ 5.30ಕ್ಕೆ ನಾಗ್ಪುರ ವಿಮಾನ ನಿಲ್ದಾಣದಲ್ಲಿ ಇಳಿಯಿತು ಎಂದರು.

