HEALTH TIPS

ಅಡೂರು ದೇಗುಲ ಜಾತ್ರೆ ಮತ್ತು ಪುನರ್ ಪ್ರತಿಷ್ಠೆ; ಆಮಂತ್ರಣ ಪತ್ರಿಕೆ ಬಿಡುಗಡೆ

ಮುಳ್ಳೇರಿಯ: ಅಡೂರು ಶ್ರೀ ಮಹತೋಭಾರ ಮಹಾಲಿಂಗೇಶ್ವರ ಶ್ರೀ ಮಹಾವಿಷ್ಣು ವಿನಾಯಕ ದೇಗುಲದ ವಾರ್ಷಿಕ ಜಾತ್ರೋತ್ಸವ ಮತ್ತು ಶ್ರೀ ಮಹಾಗಣಪತಿ ಹಾಗೂ ಶ್ರೀ ಮಹಾವಿಷ್ಣು ದೇವರ ಪುನರ್ ಪ್ರತಿಷ್ಠಾ ಕಲಶೋತ್ಸವವು ಮಾ. 11ರಿಂದ 25ರ ತನಕ ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಬುಧವಾರ ಶ್ರೀ ದೇಗುಲದಲ್ಲಿ ನಡೆಯಿತು.

ಜಾತ್ರೋತ್ಸವ ಸಮಿತಿ ಅಧ್ಯಕ್ಷ ಅತ್ತನಾಡಿ ರಾಮಚಂದ್ರ ಮಣಿಯಾಣಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಜೀರ್ಣೋದ್ದಾರ ಸಮಿತಿ ಉಪಾಧ್ಯಕ್ಷ ಎ.ಗೋಪಾಲ ಮಣಿಯಾಣಿ, ಪವಿತ್ರಪಾಣಿ ರಾಧಾಕೃಷ್ಣ ಭಾರಿತ್ತಾಯ, ಬೆಳ್ಳಿಪ್ಪಾಡಿ ಸದಾಶಿವ ರೈ, ದೇಗುಲ ಕಾರ್ಯನಿರ್ವಹಣಾ ಅಧಿಕಾರಿ ಗಂಗಾಧರ ರಾವ್ ಮತ್ತು ಸಲಹಾಸಮಿತಿ ಸದಸ್ಯರು, ಜೀರ್ಣೋದ್ಧಾರ ಸಮಿತಿ ಸದಸ್ಯರು, ಜಾತ್ರೋತ್ಸವ ಸಮಿತಿ ಸದಸ್ಯರು, ಪ್ರಾದೇಶಿಕ ಸಮಿತಿ ಸದಸ್ಯರು ಉಪಸ್ಥಿತರಿದ್ದರು. ಜೀರ್ಣೋದ್ಧಾರ ಸಮಿತಿ ಕಾರ್ಯದರ್ಶಿ ಚಂದ್ರಶೇಖರ ರಾವ್ ಸ್ವಾಗತಿಸಿ, ಉತ್ಸವ ಸಮಿತಿ ಕಾರ್ಯದರ್ಶಿ ಗಂಗಾಧರ ರಾವ್ ಕಾಂತಡ್ಕ ವಂದಿಸಿದರು. 


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries