HEALTH TIPS

ಭಾರತ-ಅಮೆರಿಕ ವಾಣಿಜ್ಯ ಒಪ್ಪಂದದ ವಿವರಗಳು ಅಂತಿಮ ಹಂತದಲ್ಲಿ: ಎಸ್‌.ಜೈಶಂಕರ್‌

ನವದೆಹಲಿ: 'ಭಾರತ ಹಾಗೂ ಅಮೆರಿಕ ನಡುವಿನ ವ್ಯಾಪಾರ ಒಪ್ಪಂದ ವಿವರಗಳು ಅಂತಿಮ ಹಂತದಲ್ಲಿದ್ದು, ಆದಷ್ಟು ಬೇಗ ಪೂರ್ಣಗೊಳ್ಳಲಿವೆ' ಎಂದು ವಿದೇಶಾಂಗ ಸಚಿವ ಜೈಶಂಕರ್‌ ತಿಳಿಸಿದ್ದಾರೆ.

ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಜೊತೆಗೆ ವಿಸ್ತೃತ ಚರ್ಚೆ ನಡೆಸಿದ ಬಳಿಕ ಈ ವಿಷಯ ತಿಳಿಸಿದ್ದಾರೆ.

'ವಾಷಿಂಗ್ಟನ್‌ ಭೇಟಿಯೂ ಫಲಪ್ರದವಾಗಿದ್ದು, ದ್ವಿಪಕ್ಷೀಯ ವ್ಯಾಪಾರ ಒಪ್ಪಂದವು ಎರಡು ದೇಶಗಳ ನಡುವಿನ ಸಂಬಂಧವನ್ನು ಹೊಸ ಹಂತಕ್ಕೆ ಕೊಂಡೊಯ್ಯಲಿದೆ' ಎಂದು ಹೇಳಿದ್ದಾರೆ.

'ಅಪರೂಪ‍ದ ಖನಿಜಗಳ ಸಹಕಾರದ ವಿಚಾರದಲ್ಲಿ ಸಹ ವೇಗವಾಗಿ ಮುಂದುವರಿಯುತ್ತಿದೆ. ಇದಾದ ಬಳಿಕ ರಕ್ಷಣೆ, ಇಂಧನ ಕ್ಷೇತ್ರದಲ್ಲಿಯೂ ದ್ವಿಪಕ್ಷೀಯ ಸಂಬಂಧ ಮುಂದಿನ ದಿನಗಳಲ್ಲಿ ನೆರವೇರಲಿದೆ. ಒಟ್ಟಾರೆಯಾಗಿ ಬಲವಾದ ವೇಗವೂ ಸ್ಪಷ್ಟವಾಗಿದೆ' ಎಂದು ತಿಳಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries