ಬದಿಯಡ್ಕ : ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶತಾಬ್ದಿ ವರ್ಷಾಚರಣೆಯಂಗವಾಗಿ ಕು0ಬ್ಡಾಜೆ ಪ0ಚಾಯಿತಿ ಸಮಿತಿ ನೇತೃತ್ವದಲ್ಲಿ ಫೆ. 22 ರಂದು ಅಪರಾಹ್ನ 3 ರಿಂದ ಜನಗರದಲ್ಲಿ ಬೃಹತ್ ಹಿಂದೂ ಸಮಾಜೋತ್ಸವ ನಡೆಯಲಿದೆ. ಇದರ ಅಂಗವಾಗಿ ಪಂಚಾಯಿತಿ ಮಟ್ಟದ ಧ್ವಜ ದಿನಾಚರಣೆ ಹಾಗೂ ವಾಹನ ಪ್ರಚಾರಕ್ಕೆ ಚಾಲನೆ ನೀಡಲಾಯಿತು. ಧಾರ್ಮಿಕ ಮುಂದಾಳು ಡಾ. ವೇಣುಗೋಪಾಲ ಕಳೆಯತ್ತೋಡಿ ಧ್ವಜ ಹಸ್ತಾಂತರಿಸುವ ಮೂಲಕ ಚಾಲನೆ ನೀಡಿದರು. ಸಮಿತಿ ಪದಾಧಿಕಾರಿಗಳು, ಕಾರ್ಯಕರ್ತರು ಭಾಗವಹಿಸಿದ್ದರು. ಹಿಂದೂ ಸಮಾಜೋತ್ಸವ ಸಮಿತಿ ಅಧ್ಯಕ್ಷ ಸಂತೋಷ್ ಕುಮಾರ್ ರೈ ಗಾಡಿಗುಡ್ಡೆ ಸ್ವಾಗತಿಸಿ, ಮಹಿಳಾ ಸಮಿತಿ ಅಧ್ಯಕ್ಷೆ ಲಾವಣ್ಯ ಗಿರೀಶ್ ವಂದಿಸಿದರು.

.jpg)
