HEALTH TIPS

ಅಮೆರಿಕ- ಭಾರತ ವ್ಯಾಪಾರ ಒಪ್ಪಂದ: ರೈತರ ವಿಚಾರದಲ್ಲಿ ರಾಜಿ ಇಲ್ಲ, ವೆನೆಜುವೆಲಾ ತೈಲ ಖರೀದಿ ಮಾಡೋದಿಲ್ಲ

ನವದೆಹಲಿ: ಭಾರತ ಮತ್ತು ಅಮೆರಿಕ ವ್ಯಾಪಾರ ಒಪ್ಪಂದಕ್ಕಾಗಿ (India-US trade deal) ರೈತರ ವಿಷಯದಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ. ವೆನೆಜುವೆಲಾದ ತೈಲವನ್ನು (Venezuelan oil) ಕೂಡ ಖರೀದಿಸುವುದಿಲ್ಲ ಎಂದು ಕೇಂದ್ರ ಸರ್ಕಾರ ಮೂಲಗಳು ತಿಳಿಸಿವೆ. ಪ್ರಧಾನಿ ನರೇಂದ್ರ ಮೋದಿ ಸೋಮವಾರ ದೂರವಾಣಿ ಮೂಲಕ ಸಂಭಾಷಣೆ ನಡೆಸಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಬಳಿಕ ಭಾರತ ಮತ್ತು ಅಮೆರಿಕ ವ್ಯಾಪಾರ ಒಪ್ಪಂದ ಮಾತುಕತೆಗಳನ್ನು ಪೂರ್ಣಗೊಳಿಸಿವೆ.

ಇದರಡಿಯಲ್ಲಿ ವಾಷಿಂಗ್ಟನ್ ಭಾರತೀಯ ಸರಕುಗಳ ಮೇಲಿನ ಪರಸ್ಪರ ಸುಂಕವನ್ನು ಶೇ. 25ರಿಂದ ಶೇ.18ಕ್ಕೆ ಕಡಿತಗೊಳಿಸುತ್ತದೆ ಎಂದು ತಿಳಿಸಿದೆ.

ಅಮೆರಿಕ ಮತ್ತು ಭಾರತದ ನಡುವಿನ ವ್ಯಾಪಾರ ಒಪ್ಪಂದಕ್ಕಾಗಿ ಭಾರತ ವೆನೆಜುವೆಲಾದಿಂದ ಕಚ್ಚಾ ತೈಲ ಖರೀದಿ ಬಗ್ಗೆ ಯೋಜಿಸಿಲ್ಲ. ಮುಂದೆ ಇಂಧನ ಖರೀದಿ ಸಂಬಂಧ ಹೊಸ ಒಪ್ಪಂದ ನಡೆಸುವ ಸಾಧ್ಯತೆ ಇದ್ದರೂ ಇದರಲ್ಲಿ ಹೆಚ್ಚಿನ ಆದ್ಯತೆಯನ್ನು ರೈತರ ಹಿತಾಸಕ್ತಿಗಳನ್ನು ರಕ್ಷಿಸಲು ನೀಡಲಾಗಿದೆ. ಕೃಷಿ ಮತ್ತು ಡೈರಿ ಗಳಂತಹ ಸೂಕ್ಷ್ಮ ವಲಯಗಳ ರಕ್ಷಣೆ ವಿಚಾರದಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ. ಈ ಒಪ್ಪಂದದಡಿಯಲ್ಲಿ ವಿಸ್ತೃತ ಮಾರುಕಟ್ಟೆ ಪ್ರವೇಶಕ್ಕೆ ಅನುಮತಿ ಇದ್ದರೂ ಭಾರತವು ಇವುಗಳ ರಕ್ಷಣೆಗೆ ಒತ್ತು ನೀಡಲಿದೆ ಎಂದು ಹೇಳಿದೆ.

ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಸೋಮವಾರ ದೂರವಾಣಿ ಸಂಭಾಷಣೆ ನಡೆಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತ ಮತ್ತು ಅಮೆರಿಕ ವ್ಯಾಪಾರ ಒಪ್ಪಂದಕ್ಕೆ ಒಪ್ಪಿಕೊಂಡಿವೆ. ಇದರ ಅಡಿಯಲ್ಲಿ ವಾಷಿಂಗ್ಟನ್ ಭಾರತೀಯ ಸರಕುಗಳ ಮೇಲಿನ ಪರಸ್ಪರ ಸುಂಕವನ್ನು ಶೇ. 25 ರಿಂದ ಶೇ. 18 ಕ್ಕೆ ಕಡಿತಗೊಳಿಸುತ್ತದೆ ಎಂದು ತಿಳಿಸಿದರು.

ಈ ಕುರಿತು ಪ್ರತಿಕ್ರಿಯಿಸಿರುವ ಪ್ರಧಾನಿ ನರೇಂದ್ರ ಮೋದಿ, ಈ ವ್ಯಾಪಾರ ಒಪ್ಪಂದದಿಂದ ಅನುಕೂಲಕರ ಆರ್ಥಿಕ ವಾತಾವರಣವನ್ನು ಸೃಷ್ಟಿಯಾಗಲಿದೆ. ಇದು ಜಾಗತಿಕ ವ್ಯಾಪಾರ ಮಾತುಕತೆಗಳಿಗೆ ಸರ್ಕಾರದ ಸ್ಥಿರ ಮತ್ತು ಅಳತೆಯ ವಿಧಾನವನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದ್ದರು.

ಇನ್ನು ಇಂಧನ ಪೂರೈಕೆಗಳ ಕುರಿತು ಸದ್ಯ ಚಾಲ್ತಿಯಲ್ಲಿರುವ ಮಾರುಕಟ್ಟೆ ದರಗಳ ಆಧಾರದ ಮೇಲೆ ಅಂತಾರಾಷ್ಟ್ರೀಯ ನಿರ್ಬಂಧಗಳ ಅಡಿಯಲ್ಲಿಲ್ಲದ ದೇಶಗಳಿಂದ ಭಾರತವು ಕಚ್ಚಾ ತೈಲ ಖರೀದಿಗೆ ಚಿಂತನೆ ನಡೆಸುತ್ತಿದೆ. ನಿರ್ಬಂಧಗಳು ಜಾರಿಯಲ್ಲಿದ್ದಾಗ ವೆನೆಜುವೆಲಾದಿಂದ ಖರೀದಿಸಲಿಲ್ಲ. ಈಗ ನಿರ್ಬಂಧಗಳನ್ನು ತೆಗೆದುಹಾಕಲಾಗಿದೆ ಎಂದು ಸರ್ಕಾರಿ ಮೂಲಗಳು ಸ್ಪಷ್ಟಪಡಿಸಿವೆ.

ಮೂರು ದಿನಗಳ ಹಿಂದೆಯಷ್ಟೇ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತವು ಇರಾನ್‌ನಿಂದ ಕಚ್ಚಾ ತೈಲವನ್ನು ಖರೀದಿಸುವ ಬದಲು ವೆನೆಜುವೆಲಾ ತೈಲವನ್ನು ಆಮದು ಮಾಡಿಕೊಳ್ಳಲಿದೆ ಎಂದು ಹೇಳಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries