HEALTH TIPS

ಭಾರತಕ್ಕೆ ರಾಜತಾಂತ್ರಿಕ ಜಯ: ಫ್ಯಾಕ್ಟ್‌ಶೀಟ್‌ನಲ್ಲಿ 'ದ್ವಿದಳ ಧಾನ್ಯಗಳು' ಉಲ್ಲೇಖ ಕೈಬಿಟ್ಟ ಅಮೆರಿಕಾ..!

ನವದೆಹಲಿ: ಅಮೆರಿಕಾ ಜೊತೆಗಿನ ವ್ಯಾಪಾರ ಒಪ್ಪಂದದಲ್ಲಿ ಭಾರತಕ್ಕೆ ದೊಡ್ಡ ರಾಜತಾಂತ್ರಿಕ ಗೆಲುವು ಸಿಕ್ಕಿದೆ. ಭಾರತ-ಅಮೆರಿಕ ನಡುವಿನ ತಾತ್ಕಾಲಿಕ ವ್ಯಾಪಾರ ಒಪ್ಪಂದಕ್ಕೆ ಸಂಬಂಧಿಸಿದಂತೆ ವೈಟ್ ಹೌಸ್ ಪರಿಷ್ಕೃತ ಫ್ಯಾಕ್ಟ್ ಶೀಟ್ ಬಿಡುಗಡೆಗೊಳಿಸಿದ್ದು, ಇದರಲ್ಲಿ ಕೆಲವು ದ್ವಿದಳ ಧಾನ್ಯಗಳು ಎಂಬ ಉಲ್ಲೇಖವನ್ನು ಕೈಬಿಟ್ಟಿರುವುದು ಕಂಡು ಬಂದಿದೆ.

ಸೋಮವಾರ ಬಿಡುಗಡೆಗೊಂಡ ಮೊದಲ ಫ್ಯಾಕ್ಟ್‌ಶೀಟ್‌ನಲ್ಲಿ, ಭಾರತವು ಅಮೆರಿಕದ ಕೈಗಾರಿಕಾ ಉತ್ಪನ್ನಗಳು ಮತ್ತು ಕೆಲವು ಕೃಷಿ ಉತ್ಪನ್ನಗಳ ಮೇಲಿನ ಸುಂಕವನ್ನು ಕಡಿಮೆ ಮಾಡುವುದು ಅಥವಾ ರದ್ದುಪಡಿಸುವುದಾಗಿ ಹೇಳಲಾಗಿತ್ತು.

ಈ ಪಟ್ಟಿಯಲ್ಲಿ ಡ್ರೈಡ್ ಡಿಸ್ಟಿಲರ್ಸ್ ಗ್ರೇನ್ಸ್, ಕೆಂಪು ಜೋಳ, ಡ್ರೈಫ್ರೂಟ್ಸ್, ತಾಜಾ ಹಣ್ಣುಗಳು, ಕೆಲವು ಬೇಳೆಗಳು, ಸೋಯಾಬೀನ್ ಎಣ್ಣೆ, ವೈನ್ ಮತ್ತು ಮದ್ಯಪಾನ ಪದಾರ್ಥಗಳು ಸೇರಿದಂತೆ ಹಲವು ಉತ್ಪನ್ನಗಳು ಸೇರಿದ್ದವು.

ಭಾರತವು ಹೆಚ್ಚಿನ ಅಮೇರಿಕನ್ ಉತ್ಪನ್ನಗಳನ್ನು ಖರೀದಿಸಲು ಮತ್ತು 500 ಶತಕೋಟಿ USD ಗಿಂತ ಹೆಚ್ಚಿನ ಅಮೆರಿಕಾ ಇಂಧನ, ಮಾಹಿತಿ ಮತ್ತು ಸಂವಹನ ತಂತ್ರಜ್ಞಾನ, ಕೃಷಿ, ಕಲ್ಲಿದ್ದಲು ಮತ್ತು ಇತರ ಉತ್ಪನ್ನಗಳನ್ನು ಖರೀದಿಸಲು "ಬದ್ಧವಾಗಿದೆ" ಹೇಳಲಾಗಿತ್ತು.

ಆದರೆ, ಮಂಗಳವಾರ ಬಿಡುಗಡೆಗೊಂಡ ಪರಿಷ್ಕೃತ ಫ್ಯಾಕ್ಟ್‌ಶೀಟ್‌ನಲ್ಲಿ ಬೇಳೆಗಳು ಎಂಬ ಉಲ್ಲೇಖವನ್ನು ಸಂಪೂರ್ಣವಾಗಿ ತೆಗೆದುಹಾಕಲಾಗಿದೆ. ಜೊತೆಗೆ, ಮೊದಲ ಪಟ್ಟಿಯಲ್ಲಿ ಬಳಸಿದ್ದ "India is committed" (ಭಾರತ ಬದ್ಧವಾಗಿದೆ) ಎಂಬ ಪದವನ್ನು "India intends" (ಭಾರತ ಉದ್ದೇಶಿಸಿದೆ) ಎಂದು ಬದಲಾಯಿಸಿದೆ.

ಭಾರತವು ಅಮೇರಿಕಾದ ಹೆಚ್ಚಿನ ಉತ್ಪನ್ನಗಳನ್ನು ಖರೀದಿಸಲು ಮತ್ತು 500 ಬಿಲಿಯನ್ ಯುಎಸ್ ಡಾಲರ್‌ಗಿಂತ ಹೆಚ್ಚಿನ ಅಮೆರಿಕಾದ ಇಂಧನ, ಮಾಹಿತಿ ಮತ್ತು ಸಂವಹನ ತಂತ್ರಜ್ಞಾನ, ಕಲ್ಲಿದ್ದಲು ಮತ್ತು ಇತರ ಉತ್ಪನ್ನಗಳನ್ನು ಖರೀದಿಸಲು ಉದ್ದೇಶಿಸಿದೆ ಎಂದು ಪರಿಷ್ಕೃತ ಫ್ಯಾಕ್ಟ್ ಶೀಟ್ ನಲ್ಲಿ ತಿಳಿಸಲಾಗಿದೆ.

ಸಂಯುಕ್ತ್ ಕಿಸಾನ್ ಮೋರ್ಚಾ (SKM), ಮತ್ತು ಅಖಿಲ ಭಾರತ ಕಿಸಾನ್ ಸಭಾ (AIKS) ಸೇರಿದಂತೆ ಹಲವಾರು ರೈತ ಸಂಘಟನೆಗಳು ಭಾರತ-ಅಮೆರಿಕಾ ವ್ಯಾಪಾರ ಒಪ್ಪಂದವನ್ನು ಟೀಕಿಸಿ ಫೆಬ್ರವರಿ 12ಕ್ಕೆ ರಾಷ್ಟ್ರವ್ಯಾಪಿ ಪ್ರತಿಭಟನೆಗಳನ್ನು ನಡೆಸುವುದಾಗಿ ಘೋಷಿಸಿತ್ತು. ಇದರ ಬೆನ್ನಲ್ಲೇ ಈ ಮಹತ್ವದ ಬೆಳವಣಿಕೆ ಹಾಗೂ ಬದಲಾವಣೆಗಳು ಕಂಡು ಬಂದಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries