ಕುಂಬಳೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ) ಮಂಜೇಶ್ವರ ತಾಲೂಕಿನ ಕುಂಬಳೆಯ ಕೊಡ್ಯಮೆ ಪ್ರೌಡ ಶಾಲೆಯಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಂಯುಕ್ತ ಆಶ್ರಯದಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮವನ್ನು ನಡೆಸಲಾಯಿತು.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಅಬಕಾರಿ ಅಧಿಕಾರಿ ಪೀತಾಂಬರನ್ ವಿಧ್ಯಾರ್ಥಿಗಳಿಗೆ ಮಾದಕ ವ್ಯಸನದ ಹಾಗೂ ಯುವ ಪೀಳಿಗೆಗೆ ಹಾಗೂ ಸಮಾಜದಲ್ಲಿ ಅದರಿಂದಾಗುವ ದುಷ್ಪರಿಣಾಮದ ಬಗ್ಗೆ ಮಾಹಿತಿ ನೀಡಿದರು.
ಕುಂಬಳೆ ವಲಯದ ಜನ ಜಾಗೃತಿ ಅದ್ಯಕ್ಷ ಮಹೇಶ್ ಪುಣಿಯೂರ್, ಶಾಲಾ ಮುಖ್ಯೋಪಾಧ್ಯಾಯ ಪ್ರದೀಪ್, ಕುಂಬಳೆ ವಲಯ ಮೇಲ್ವಿಚಾರಕ ಅಭಿಷೇಕ್, ಸೇವಾ ಪ್ರತಿನಿಧಿ ಸರಿತಾ ಹಾಗೂ ವಿಧ್ಯಾರ್ಥಿಗಳು ಪಾಲ್ಗೊಂಡಿದ್ದರು.

