HEALTH TIPS

'ವಂದೇ ಮಾತರಂ' ಹಾಡುವುದು ಕಡ್ಡಾಯ: ಮತೀಯ ಅಜೆಂಡಾ, ಮುಸ್ಲಿಂ ಸಂಘಟನೆ ಜಮಿಯತ್ ತೀವ್ರ ವಿರೋಧ!

 ನವದೆಹಲಿ: ರಾಷ್ಟ್ರೀಯ ಗೀತೆ ವಂದೇ ಮಾತರಂ ಗೀತೆ ಕುರಿತು ಕೇಂದ್ರ ಗೃಹ ಸಚಿವಾಲಯ ಹೊಸ ಮಾರ್ಗಸೂಚಿ ಹೊರಡಿಸಿದೆ. ಎಲ್ಲಾ ಸರ್ಕಾರಿ ಕಾರ್ಯಕ್ರಮಗಳಲ್ಲಿ, ಎಲ್ಲಾ ಶಾಲೆಗಳಲ್ಲಿ ವಂದೇ ಮಾತರಂ ಗೀತೆಯ ಎಲ್ಲಾ ಆರು ಚರಣಗಳನ್ನು ಹಾಡುವುದನ್ನು ಕಡ್ಡಾಯಪಡಿಸಿದೆ. ಅಲ್ಲದೇ ವಂದೇ ಮಾತರಂ ಹಾಡುವಾಗ ಅಥವಾ ನುಡಿಸುವಾಗ ಎಲ್ಲರೂ ಎದ್ದು ನಿಲ್ಲಬೇಕು. ರಾಷ್ಟ್ರಗೀತೆಗೂ ಮುನ್ನ 3 ನಿಮಿಷ 10 ಸೆಕೆಂಡ್ ನ ವಂದೇ ಮಾತರಂನ 6 ಚರಣಗಳನ್ನು ಹಾಡಬೇಕು ಎಂದು ನಿರ್ದೇಶನ ನೀಡಿದೆ. 


ಇದನ್ನು 'ಏಕಪಕ್ಷೀಯ' ಮತ್ತು 'ನಿರಂಕುಶ' ಎಂದು ಮುಸ್ಲಿಂ ಸಂಘಟನೆ ಜಮಿಯತ್ ಉಲಮಾ-ಇ-ಹಿಂದ್ ಗುರುವಾರ ಹೇಳಿದೆ. ಇದು ಸಂವಿಧಾನ ಖಾತರಿಪಡಿಸುವ ಧಾರ್ಮಿಕ ಸ್ವಾತಂತ್ರ್ಯದ ಮೇಲಿನ ಉಗ್ರ ದಾಳಿ ಎಂದು ಬಣ್ಣಿಸಿದೆ.

ಈ ಕುರಿತು ಮಾತನಾಡಿರುವ ಜಮಿಯತ್ ಉಲಮಾ-ಇ-ಹಿಂದ್ ಅಧ್ಯಕ್ಷ ಮೌಲಾನಾ ಅರ್ಷದ್ ಮದನಿ, ವಂದೇ ಮಾತರಂ ಹಾಡುವುದು ಅಥವಾ ನುಡಿಸುವುದಕ್ಕೆ ಮುಸ್ಲಿಮರು ಯಾರು ತಡೆಯುವುದಿಲ್ಲ. ಆದರೆ ಗೀತೆಯ ಕೆಲವು ಪದ್ಯಗಳು ಮಾತೃಭೂಮಿಯನ್ನು ದೇವತೆಯಾಗಿ ಬಿಂಬಿಸುವ ನಂಬಿಕೆಗಳನ್ನು ಆಧರಿಸಿವೆ. ಇದು ಏಕದೇವತಾವಾದಿ ಧರ್ಮಗಳ ಮೂಲಭೂತ ನಂಬಿಕೆಗೆ ವಿರುದ್ಧವಾಗಿದೆ ಎಂದು ಹೇಳಿದ್ದಾರೆ.

ಇದು ಅಲ್ಪಸಂಖ್ಯಾತರ ಸಾಂವಿಧಾನಿಕ ಹಕ್ಕುಗಳನ್ನು ಮೊಟಕುಗೊಳಿಸುವ ವ್ಯವಸ್ಥಿತ ಪ್ರಯತ್ನವಾಗಿದೆ."ಮುಸ್ಲಿಮರು ಮಾತ್ರ ಅಲ್ಲಾನನ್ನು ಪೂಜಿಸುತ್ತಾರೆ. ಈ ಗೀತೆ ಹಾಡಲು ಒತ್ತಾಯಿಸುವುದು ಸಂವಿಧಾನದ 25 ನೇ ವಿಧಿ ಮತ್ತು ಸುಪ್ರೀಂ ಕೋರ್ಟ್‌ನ ಹಲವಾರು ತೀರ್ಪುಗಳ ಸ್ಪಷ್ಟ ಉಲ್ಲಂಘನೆಯಾಗಿದೆ" ಎಂದು ಅವರು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ. 









ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries