ಉಪ್ಪಳ: ಸುಳ್ಯದ ಕೆ.ವಿ.ಜಿ ದಂತ ವಿದ್ಯಾಲಯ ಕಾಲೇಜು, ಶ್ರೀ ಸತ್ಯ ಸಾಯಿ ಸೇವಾ ಸಮಿತಿ ಬಾಯಾರು ಹಾಗೂ ಪ್ರಶಾಂತಿ ವಿದ್ಯಾಕೇಂದ್ರ ಬಾಯಾರು ಇದರ ಸಂಯುಕ್ತ ಆಶ್ರಯದಲ್ಲಿ ಉಚಿತ ದಂತ ಚಿಕಿತ್ಸಾ ಶಿಬಿರ ಬಾಯಾರು ಪ್ರಶಾಂತಿ ವಿದ್ಯಾಕೇಂದ್ರದಲ್ಲಿ ಜರುಗಿತು.
ಕೆ.ವಿ.ಜಿ ಡೆಂಟಲ್ ಕಾಲೇಜು ಮತ್ತು ಆಸ್ಪತ್ರೆಯ ಸಾರ್ವಜನಿಕ ಆರೋಗ್ಯ ದಂತ ಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ. ಸುಮನ್ ಉದ್ಘಾಟಿಸಿದರು. ,ಪ್ರಶಾಂತಿ ಸೇವಾ ಟ್ರಸ್ಟ್ ಉಪಾಧ್ಯಕ್ಷ ರಾಮಕೃಷ್ಣ ಭಟ್ ಪೆಲತ್ತಡ್ಕ ಅಧ್ಯಕ್ಷತೆ ವಹಿಸಿದ್ದರು. ಕಾಸರಗೋಡು ಸತ್ಯಸಾಯಿ ಸೇವಾ ಸಂಸ್ಥೆಗಳ ಜಿಲ್ಲಾಧ್ಯಕ್ಷ ಹಿರಣ್ಯ ಮಹಾಲಿಂಗ ಭಟ್, ಪ್ರಶಾಂತಿ ಸೇವಾ ಟ್ರಸ್ಟ್ ನ ಕೋಶಾಧಿಕಾರಿ ನಾರಾಯಣ ಭಟ್ ಮಾಣಿಪ್ಪಾಡಿ, ಶಾಲಾ ಪ್ರಾಂಶುಪಾಲ ವಾಮನನ್, ಶಾಲಾ ಹಿರಿಯ ವಿದ್ಯಾರ್ಥಿನಿ ಡಾ. ವಿದ್ಯಾಸರಸ್ವತಿ ಉಪಸ್ಥಿತರಿದ್ದರು. ಶಿಬಿರದಲ್ಲಿ 150ಕ್ಕೂ ಹೆಚ್ಚುಮಂದಿ ಪಾಲ್ಗೊಂಡಿದ್ದರು.


