HEALTH TIPS

ಕೇಂದ್ರ ಬಜೆಟ್‌ನಲ್ಲಿ ರಾಜ್ಯದ ನಿರ್ಲಕ್ಷ್ಯ: ಕೇರಳದಲ್ಲಿ ಇಂದು ಕಪ್ಪು ದಿನ ಆಚರಣೆ

ತಿರುವನಂತಪುರಂ: ಕೇಂದ್ರ ಬಜೆಟ್‌ನಲ್ಲಿ ಕೇರಳ ರಾಜ್ಯವನ್ನು ನಿರ್ಲಕ್ಷಿಸಿರುವ ಕ್ರಮವನ್ನು ಖಂಡಿಸಿ ಇಂದು (ಫೆಬ್ರುವರಿ 3ರಂದು) 'ಕಪ್ಪು ದಿನ'ವನ್ನು ಆಚರಿಸಲಾಗುವುದು ಎಂದು ಆಡಳಿತಾರೂಢ ಸಿಪಿಎಂ ಸೋಮವಾರ ತಿಳಿಸಿದೆ.

'ಬಜೆಟ್‌ಗೂ ಮುನ್ನ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ 29 ಬೇಡಿಕೆಗಳನ್ನು ಸಲ್ಲಿಸಲಾಗಿತ್ತು.

ಆದರೆ, ಅವುಗಳಲ್ಲಿ ಯಾವುದನ್ನೂ ಸ್ವೀಕರಿಸಿಲ್ಲ. ಭಾರತದ ಭೂಪಟದಲ್ಲಿ ಕೇರಳ ಅಸ್ತಿತ್ವದಲ್ಲಿಲ್ಲ ಎಂಬಂತೆ ಬಜೆಟ್‌ ಮಂಡಿಸಲಾಗಿದೆ' ಎಂದು ಪಕ್ಷದ ರಾಜ್ಯ ಕಾರ್ಯದರ್ಶಿ ಪತ್ರಿಕಾ ಹೇಳಿಕೆಯಲ್ಲಿ ದೂರಿದ್ದಾರೆ.

'ಏಮ್ಸ್‌ ಬೇಡಿಕೆಯನ್ನು ಕೇಂದ್ರ ಮತ್ತೊಮ್ಮೆ ನಿರ್ಲಕ್ಷಿಸಿದೆ. ಏಳು ಹೈಸ್ಪೀಡ್‌ ರೈಲು ಕಾರಿಡಾರ್‌, ಒಳನಾಡು ಜಲ ಸಾರಿಗೆ ಯೋಜನೆಗಳಿಂದಲೂ ರಾಜ್ಯವನ್ನು ಹೊರಗಿಡಲಾಗಿದೆ. ವಿಝಿಂಜಂ ಬಂದರಿಗೆ ಯಾವುದೇ ವಿಶೇಷ ಪ್ಯಾಕೇಜ್‌ಗೆ ಅನುಮೋದನೆ ನೀಡಿಲ್ಲ' ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

'ಫೆಬ್ರುವರಿ 3ರಂದು ಎಲ್ಲ ಬೂತ್‌ಗಳಲ್ಲಿ ಕಪ್ಪು ಧ್ವಜಗಳನ್ನು ಹಾರಿಸಲಾಗುವುದು. ಜನವಿರೋಧಿ ಬಜೆಟ್‌ ವಿರುದ್ಧ ನಡೆಯುವ ಪ್ರತಿಭಟನೆಗಳಲ್ಲಿ ಸಾರ್ವಜನಿಕರು ಭಾಗವಹಿಸಬೇಕು' ಎಂದು ಮನವಿ ಮಾಡಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries