ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಮೆಹಬೂಬಾ ಮುಫ್ತಿ, ಪ್ರಧಾನಿ ಮೋದಿ ಇಸ್ರೇಲ್‌ಗೆ ಹೋಗಿ ಒಬ್ಬ ಅಪರಾಧಿಯನ್ನು ಅಪ್ಪಿಕೊಂಡರು. ನೆತನ್ಯಾಹು ಅವರನ್ನು ಜಗತ್ತು ದೂರವಿಟ್ಟಿದೆ. ಅನೇಕ ದೇಶಗಳಿಗೆ ಪ್ರವೇಶಿಸುವುದನ್ನು ನಿಷೇಧಿಸಿದೆ ಎಂದು ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಎರಡು ದಿನಗಳ ಭೇಟಿಗೆ ಬುಧವಾರ ಇಸ್ರೇಲ್ ಗೆ ತೆರಳಿದ್ದಾರೆ.
ವಿಜ್ಞಾನ ಮತ್ತು ತಂತ್ರಜ್ಞಾನ, ನಾವೀನ್ಯತೆ, ಕೃಷಿ, ನೀರು ನಿರ್ವಹಣೆ, ರಕ್ಷಣೆ ಮತ್ತು ಭದ್ರತೆ, ವ್ಯಾಪಾರ ಮತ್ತು ಹೂಡಿಕೆ ಹಾಗೂ ಜನರ ಸಂಬಂಧಗಳು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಹಕಾರವನ್ನು ಮತ್ತಷ್ಟು ಬಲಪಡಿಸುವ ಗುರಿಯನ್ನು ಈ ಭೇಟಿಯು ಹೊಂದಿದೆ ಎಂದು ಪ್ರಧಾನಿ ಮೋದಿ ಹೇಳಿದ್ದರು.

