HEALTH TIPS

ಗೆಳೆಯನ ಗೆಳತಿಗೆ ಗುಂಡಿಕ್ಕಿದ ಯುವತಿ: ದುರಂತದಲ್ಲಿ ಅಂತ್ಯವಾದ ತ್ರಿಕೋನ ಪ್ರೇಮಕಥೆ

ಮುಂಬೈ; 19 ವರ್ಷದ ಯುವತಿಯೊಬ್ಬಳನ್ನು ಗುಂಡಿಕ್ಕಿ ಭೀಕರವಾಗಿ ಹತ್ಯೆ ಮಾಡಲಾಡಿರುವ ಪ್ರಕರಣ ಮುಂಬೈನ ಶಿವಾಜಿ ನಗರದಲ್ಲಿ ವರದಿಯಾಗಿದೆ. ತ್ರಿಕೋನ ಪ್ರೇಮಕಥೆಯೇ ಕೃತ್ಯಕ್ಕೆ ಕಾರಣ ಎನ್ನಲಾಗಿದೆ. ಮೃತ ಯುವತಿಯನ್ನು ಶಿಫಾ ಎಂದು ಗುರುತಿಸಲಾಗಿದೆ.

ಮೃತ ಯುವತಿ ಹಾಗೂ 23 ವರ್ಷದ ಯುವಕ ಹಾಗೂ ಆರೋಪಿ 25 ವರ್ಷದ ಮತ್ತೊಬ್ಬ ಯುವತಿ ನಡುವೆ ವೈಯಕ್ತಿಕ ವಿಚಾರಕ್ಕೆ ಜಗಳವಾಗಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪ್ರಾಥಮಿಕ ಮಾಹಿತಿ ಪ್ರಕಾರ, ಮೂವರ ನಡುವೆ ತ್ರಿಕೋನ ಪ್ರೇಮಕಥೆ ಇತ್ತು. ಆದರೆ ಶಿಫಾ ಹಾಗೂ ಯುವಕನ ನಡುವೆ ಇತ್ತೀಚೆಗೆ ವೈಮನಸ್ಸು ಏರ್ಪಟ್ಟಿತ್ತು. ಹೀಗಾಗಿ ಶಿಫಾಳನ್ನು, ಯುವತಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಶಿಫಾಳನ್ನು ಕರೆಸಿ ಹಾಡಹಗಲೇ ಆರೋಪಿ ಯುವತಿ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಈ ಘಟನೆಯಿಂದಾಗಿ ಸ್ಥಳೀಯರು ಬೆಚ್ಚಿ ಬಿದ್ದಿದ್ದಾರೆ ಎಂದು 'ಇಂಡಿಯಾ ಟುಡೇ' ವರದಿ ಮಾಡಿದೆ.

ಶಿಫಾಳನ್ನು ಆಸ್ಪತ್ರೆಗೆ ದಾಖಲಿಸಿದಾದರೂ ಆಕೆ ಬದುಕುಳಿಯಲಿಲ್ಲ ಎಂದು ತಿಳಿದು ಬಂದಿದೆ.

ಸಿಸಿಟಿವಿ ದೃಶ್ಯವಾಳಿಗಳನ್ನು ಪರಿಶೀಲಿಸಿದ ಪೊಲೀಸರು, ಘಟನೆ ನಡೆದು 12 ಗಂಟೆಗಳಲ್ಲಿ ಆರೋಪಿ ಯುವತಿಯನ್ನು ಬಂಧಿಸಿದ್ದಾರೆ.

ಈ ಪ್ರಕರಣ ಸಂಬಂಧ ಯುವಕನನ್ನೂ ಬಂಧಿಸಲಾಗಿದೆ

ಭಾರತೀಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries