HEALTH TIPS

ಕಾಗದರಹಿತ ಶಾಸಕಾಂಗದತ್ತ ಬಿಹಾರ ವಿಧಾನಸಭೆ: ಕಾರ್ಯಕ್ರಮಕ್ಕೆ ನಿತೀಶ್ ಕುಮಾರ್ ಗೈರು

ಪಟ್ನಾ: ಬಿಹಾರ ವಿಧಾನಸಭೆಯಲ್ಲಿ ಕಾಗದರಹಿತ ಶಾಸಕಾಂಗ ಪ್ರಕ್ರಿಯೆಯನ್ನು ಜಾರಿಗೆ ತರುವ ನಿಟ್ಟಿನಲ್ಲಿ ರಾಷ್ಟ್ರೀಯ ಇ-ವಿಧಾನ್ ಅಪ್ಲಿಕೇಶನ್-ನೇವಾ ಅನ್ನು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಇಂದು (ಶನಿವಾರ) ಅನಾವರಣಗೊಳಿಸಿದರು.

ಈ ಕಾರ್ಯಕ್ರಮದಲ್ಲಿ ವಿಧಾನಸಭಾ ಸ್ಪೀಕರ್ ಪ್ರೇಮ್ ಕುಮಾರ್, ರಾಜ್ಯಸಭೆಯ ಉಪಾಧ್ಯಕ್ಷ ಹರಿವಂಶ್ ನಾರಾಯಣ್ ಸಿಂಗ್ ಮತ್ತು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಇತರರು ಉಪಸ್ಥಿತರಿದ್ದರು.

ಆದರೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಈ ಕಾರ್ಯಕ್ರಮಕ್ಕೆ ಗೈರಾಗಿದ್ದಾರೆ. ಇದೀಗ ಅವರ ನಡೆ ಚರ್ಚೆಗೆ ಗ್ರಾಸವಾಗಿದೆ.

'ಮುಖ್ಯಮಂತ್ರಿ ನಿತೀಶ್ ಅವರು ಸಮಾರಂಭಕ್ಕೆ ಹಾಜರಾಗಬೇಕಿತ್ತು. ಆದರೆ ಅವರಿಗೆ ಈಗಾಗಲೇ ಕಾರ್ಯಕ್ರಮ ನಿಗದಿಯಾಗಿದ್ದ ಕಾರಣ ಹಾಜರಾಗಲಿಲ್ಲ. ವಿಧಾನಸಭಾ ಸ್ಪೀಕರ್ ಅವರ ಅನುಮತಿಯನ್ನು ಪಡೆಯಲಾಗಿದೆ' ಎಂದು ರಾಜ್ಯ ಸಂಸದೀಯ ವ್ಯವಹಾರಗಳ ಸಚಿವ ವಿಜಯ್ ಕುಮಾರ್ ಚೌಧರಿ ಮಾಹಿತಿ ನೀಡಿದ್ದಾರೆ.

ದೇಶದ ಎಲ್ಲಾ ಶಾಸಕಾಂಗಗಳನ್ನು ಒಟ್ಟುಗೂಡಿಸುವುದು, ಆ ಮೂಲಕ ಬೃಹತ್ ದತ್ತಾಂಶವನ್ನು ಸಂಗ್ರಹಿಸುವುದು ಈ ಯೋಜನೆಯ ಉದ್ದೇಶವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries