ಮುಳ್ಳೇರಿಯ: ಕಾರಡ್ಕ ಬ್ಲಾಕ್ ಪಂಚಾಯತಿ ಗ್ರಾಮ ಸಭೆ ಶುಕ್ರವಾರ ಬೋವಿಕ್ಕಾನ ಸೌಪರ್ಣಿಕಾ ಆಡಿಟೋರಿಯಂನಲ್ಲಿ ನಡೆಯಿತು.
ಉಪಾಧ್ಯಕ್ಷೆ ಉಷಾ.ವಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಬ್ಲಾಕ್ ಪಂಚಾಯಿತಿ ಅಧ್ಯಕ್ಷ ಸಿ.ಬಾಲನ್ ಸಭೆ ಉದ್ಘಾಟಿಸಿದರು. ಅಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷ ರಾಜೇಶ್ ಬಾಬು ಕಾರ್ಯಯೋಜನೆಗಳ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು.
ಬೇಡಡ್ಕ ಗ್ರಾಮ ಪಂಚಾಯಿತಿ ಅಧ್ಯಕ್ಷ ಇ.ಕುಂಞÂ ರಾಮನ್, ಕುತ್ತಿಕೋಲ್ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶೋಭನಾ ಕುಮಾರಿ, ಮುಳಿಯಾರ್ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ.ಬಿ. ಮುಹಮ್ಮದ್ ಕುಂಞÂ್ಞ, ಕಾರಡ್ಕ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜನನಿ, ಕುಂಬ್ಡಾಜೆ ಗ್ರಾ.ಪಂ.ಅಧ್ಯಕ್ಷೆ ಯಶೋದಾ, ಬೆಳ್ಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಾಲತಿ ಮಾತನಾಡಿದರು. ಗುಂಪು ಚರ್ಚೆ ನಡೆಯಿತು. ಮಹಿಳಾ ಕಲ್ಯಾಣ ವಿಸ್ತರಣಾಧಿಕಾರಿ ಪಿ.ರವಿ ವಂದಿಸಿದರು.

