ಕಾಸರಗೋಡು: ನಗರದ ಕಾಳ್ಯಂಗಾಡು ಶ್ರೀ ಮೂಕಾಂಬಿಕಾ ಕ್ಷೇತ್ರದ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಎಪ್ರಿಲ್ 26 ರಿಂದ ಮೇ 2 ನೇ ತಾರೀಕುಗಳಲ್ಲಿ ಜರುಗಲಿದ್ದು, ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಎಡನೀರು ಸಂಸ್ಥಾನದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಯವರಿಗೆ ನೀಡಿ ಆಶೀರ್ವಾದ ಮಂತ್ರಾಕ್ಷತೆ ಪಡೆದು ಕಾರ್ಯಕ್ರಮಕ್ಕೆ ಆಹ್ವಾನಿಸಲಾಯಿತು.
ಶ್ರೀ ಎಡನೀರು ಮಠದಲ್ಲಿ ಆಮಂತ್ರಣಪತ್ರಿಕೆ ಸ್ವಮೀಜಿಗೆ ಹಸ್ತಾಂತರಿಸಲಾಯಿತು. ಈ ಸಂದರ್ಭ ಪುನ: ಪ್ರತಿಷ್ಠಾ ಬ್ರಹ್ಮಕಲಶೋತ್ವವ ಸಮಿತಿ ಅಧ್ಯಕ್ಷ ಡಾ. ಕೆ.ಎನ್. ವೆಂಕಟ್ರಮಣ ಹೊಳ್ಳ, ಉಪಾಧ್ಯಕ್ಷ ಚೇತನ್ ಕಾಳ್ಯಂಗಾಡು, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಮೋಹನ್‍ರಾಜ್ ಕಾಳ್ಯಂಗಾಡು, ಪ್ರಧಾನ ಕಾರ್ಯದರ್ಶಿ ದಯಾನಂದ ಕೊಳ್ಕೆಬೈಲ್, ಕಾರ್ಯದರ್ಶಿಗಳಾದ ರಂಜಿತ್ ಮನ್ನಿಪ್ಪಾಡಿ, ಗೋವಿಂದ ಕಾಳ್ಯಂಗಾಡು ಕ್ಷೇತ್ರ ಬ್ರಹ್ಮದರ್ಶಿ ನಾರಾಯಣ ಕಾಳ್ಯಂಗಾಡು ಮೊದಲಾದವರು ಉಪಸ್ಥಿತರಿದ್ದರು.


