HEALTH TIPS

ಪ್ರಶ್ನೆಗಳಿಗೆ ಉತ್ತರಿಸುವ ಧೈರ್ಯ ಮೋದಿಗಿಲ್ಲ: ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ನವದೆಹಲಿ: 'ತಮಗೆ ಕೇಳಲಾದ ಪ್ರಶ್ನೆಗಳಿಗೆ ಉತ್ತರಿಸುವ ಧೈರ್ಯ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಲ್ಲ' ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶುಕ್ರವಾರ ವಾಗ್ದಾಳಿ ನಡೆಸಿದರು. 

ಮೋದಿ ಅವರು ರಾಜ್ಯಸಭೆಯಲ್ಲಿ ಗುರವಾರ ಮಾಡಿದ ಭಾಷಣವನ್ನು ಟೀಕಿಸಿದ ಅವರು, 'ಸದನವನ್ನು ಪ್ರಜಾಪ್ರಭುತ್ವದ ರೀತಿಯಲ್ಲಿ ನಡೆಸಲು ಸರ್ಕಾರ ಬಯಸುತ್ತಿಲ್ಲ' ಎಂದು ಆಕ್ರೋಶ ವ್ಯಕ್ತಪಡಿಸಿದರು.

'ರಾಷ್ಟ್ರಪತಿ ಅವರ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಉತ್ತರಿಸಿದ ಮೋದಿ ಅವರು ಬರಿ ಸುಳ್ಳುಗಳನ್ನೇ ಪುನರಾವರ್ತಿಸಿದ್ದಾರೆ' ಎಂದು ಖರ್ಗೆ ಟೀಕಿಸಿದರು.

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರು ಸೇನೆಯ ಮಾಜಿ ಮುಖ್ಯಸ್ಥ ಎಂ.ಎಂ.ನರವಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ಮಾತನಾಡಲು ಮುಂದಾದಾಗ ಅವಕಾಶ ನೀಡಲಿಲ್ಲ. ಈ ಪುಸ್ತಕ ಪ್ರಕಟವೇ ಆಗಿಲ್ಲ ಎಂದು ಕೇಂದ್ರದ ಹಿರಿಯ ಸಚಿವರು ಹೇಳಿದರು. ವಾಸ್ತವ ಏನೆಂದರೆ ಈ ಪುಸ್ತಕ ಅಸ್ತಿತ್ವದಲ್ಲಿದೆ ಎಂದು ಅವರು ತಿಳಿಸಿದರು.

'ಮೊದಲು ಸತ್ಯವನ್ನು ಆಲಿಸಿ, ಬಳಿಕ ಉತ್ತರಿಸಿ' ಎಂದ ಅವರು, 'ನರೇಂದ್ರ ಮೋದಿ ಅವರಿಗೆ ನಾವು ಕೇಳಿದ ಪ್ರಶ್ನೆಗಳಿಗೆ ಉತ್ತರಿಸುವ ಧೈರ್ಯ ಇಲ್ಲ' ಎಂದು ಖರ್ಗೆ ಪ್ರತಿಪಾದಿಸಿದರು.

'ಕಾಂಗ್ರೆಸ್‌ ಪಕ್ಷವು ಸಿಖ್ಖರನ್ನು ಅವಮಾನಿಸಿದೆ ಎಂದು ಪ್ರಧಾನಿ ಹೇಳಿದ್ದಾರೆ. ಸದನದ ಹೊರಗೆ ಇಬ್ಬರು ವ್ಯಕ್ತಿಗಳ ನಡುವೆ ನಡೆದ ಸಂಭಾಷಣೆಯನ್ನು ಹೀಗೆ ವ್ಯಾಖ್ಯಾನಿಸುವುದು ಸರಿಯಲ್ಲ. ಕಾಂಗ್ರೆಸ್‌ ಸಿಖ್ಖರನ್ನು ಬಹಳವಾಗಿ ಗೌರವಿಸುತ್ತದೆ. ಕಾಂಗ್ರೆಸ್‌ ಪಕ್ಷದಿಂದ ಮನಮೋಹನ ಸಿಂಗ್‌ ಅವರು ಹಣಕಾಸು ಸಚಿವರಾಗಿ, ಬಳಿಕ ಪ್ರಧಾನಿಯಾಗಿ ಕಾರ್ಯನಿರ್ವಹಿಸಿದ್ದರು' ಎಂದು ಹೇಳಿದರು.

'ಮೋದಿ ಅವರ ಹೇಳಿಕೆಗಳನ್ನು ಗಮನಿಸಿದರೆ, ಅವರ ನೈತಿಕ ಸ್ಥೈರ್ಯ ಕುಗ್ಗಿದೆ' ಎಂದು ಖರ್ಗೆ ಟೀಕಿಸಿದರು.

'ಗುಪ್ತಚರ ಮಾಹಿತಿ ಮೇರೆಗೆ ಸದನದಲ್ಲಿ ಪ್ರತಿಕ್ರಿಯಿಸದಂತೆ ಮೋದಿ ಅವರಿಗೆ ಸಲಹೆ ನೀಡಿದ್ದೆ ಎಂದು ಲೋಕಸಭಾ ಸ್ಪೀಕರ್‌ ಓಂ ಬಿರ್ಲಾ ಹೇಳಿದ್ದಾರೆ. ಆದರೆ, ಪುಲ್ವಾಮಾದಂತಹ ಭಯೋತ್ಪಾದಕ ದಾಳಿ ನಡೆಯುವ ಸಂದರ್ಭದಲ್ಲಿ ಈ ಗುಪ್ತಚರ ಎಲ್ಲಿ ಹೋಗಿತ್ತು? ದೇಶದಲ್ಲಿ ಗುಂಪು ಹಲ್ಲೆಗಳು ನಡೆಯುತ್ತಿವೆ. ದಲಿತರು, ಆದಿವಾಸಿಗಳ ಮೇಲೆ ದಾಳಿಗಳು ನಡೆಯುತ್ತಿವೆ. ಹಾಗಾದರೆ ಈ ಗುಪ್ತಚರ ಎಲ್ಲಿ ಹೋಗಿದೆ?' ಎಂದು ಅವರು ಪ್ರಶ್ನಿಸಿದರು.

ಸತ್ಯವೇನೆಂದರೆ, ಅಮೆರಿಕದ ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೈನ್‌ನ ಫೈಲ್‌ಗಳಲ್ಲಿ ನರೇಂದ್ರ ಮೋದಿ ಅವರ ಹೆಸರು ಉಲ್ಲೇಖವಾಗಿರುವುದರಿಂದ ಅವರು ತೊಂದರೆಗೆ ಸಿಲುಕಿದ್ದಾರೆ. ಇದಾದ ಬಳಿಕ ಮೋದಿ ಅವರು ಟ್ರಂಪ್‌ಗೆ ಶರಣಾಗಿ ವ್ಯಾಪಾರ ಒಪ್ಪಂದ ಮಾಡಿಕೊಂಡಿದ್ದಾರೆ ಎಂದು ಖರ್ಗೆ ಆರೋಪ ಮಾಡಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries