ನವದೆಹಲಿ: ಕೇಂದ್ರ ಮಾಹಿತಿ ಆಯೋಗ (ಸಿಐಸಿ)ದ ಮುಖ್ಯ ಮಾಹಿತಿ ಆಯುಕ್ತರು ಮತ್ತು ಮಾಹಿತಿ ಆಯುಕ್ತರುಗಳ ನೇಮಕಾತಿಯ ವಿಷಯದಲ್ಲಿ, ಪ್ರತಿಪಕ್ಷ ನಾಯಕರ ಭಿನ್ನಮತವನ್ನು ಬಹಿರಂಗಪಡಿಸುವಂತೆ ತಾನು ಸರಕಾರಕ್ಕೆ ನಿರ್ದೇಶನ ನೀಡುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ತಿಳಿಸಿತು.
ಸಿಐಸಿಯಲ್ಲಿರುವ ಖಾಲಿ ಹುದ್ದೆಗಳನ್ನು ತಾನು ತುಂಬಿಸಿರುವುದಾಗಿ ಕೇಂದ್ರ ಸರಕಾರ ತಿಳಿಸಿದ ಬಳಿಕ, ಮುಖ್ಯ ನ್ಯಾಯಾಧೀಶ ಸೂರ್ಯ ಕಾಂತ್ ಹಾಗೂ ನ್ಯಾಯಮೂರ್ತಿಗಳಾದ ಜಯಮಲ್ಯ ಬಾಗ್ಚಿ ಮತ್ತು ಎನ್.ವಿ. ಅಂಜಾರಿಯ ಅವರನ್ನೊಳಗೊಂಡ ನ್ಯಾಯಪೀಠವು ಈ ತೀರ್ಪು ನೀಡಿದೆ.

