HEALTH TIPS

GST ಸರಳೀಕರಣ: ರಾಜ್ಯಗಳಿಗೆ ಆಗಿರುವ ನಷ್ಟಕ್ಕೆ ಪರಿಹಾರ ಇಲ್ಲ ಎಂದ ಹಣಕಾಸು ಸಚಿವಾಲಯ

ನವದೆಹಲಿ: ಸರಕು ಮತ್ತು ಸೇವಾ ತೆರಿಗೆಯ (ಜಿಎಸ್‌ಟಿ) ಸರಳೀಕರಣದಿಂದ ರಾಜ್ಯಗಳಿಗೆ ಆಗಿರುವ ನಷ್ಟದ ಬಗ್ಗೆ ‍ಪರಿಹಾರ ನೀಡುವ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಕೇಂದ್ರ ಹಣಕಾಸು ಸಚಿವಾಲಯ ಸ್ಪಷ್ಟಪಡಿಸಿದೆ. 

ಲೋಕಸಭೆಯಲ್ಲಿ ‍ಪ್ರಶ್ನೋತ್ತರ ಅವಧಿಯಲ್ಲಿ ಕೇಳಿದ ಪ್ರಶ್ನೆಗೆ ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್‌ ಚೌಧರಿ ಈ ಬಗ್ಗೆ ಉತ್ತರ ನೀಡಿದ್ದಾರೆ.

ಜಿಎಸ್‌ಟಿ ವ್ಯವಸ್ಥೆ ಸರಳೀಕರಣದಿಂದ ವಾರ್ಷಿಕ ₹15 ಸಾವಿರ ಕೊಟಿ ನಷ್ಟವಾಗಲಿದ್ದು, ಇದಕ್ಕೆ ಪರಿಹಾರ ನೀಡಬೇಕು ಎಂದು ಕರ್ನಾಟಕ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿತ್ತು. ತಮ್ಮ ರಾಜ್ಯಗಳಿಗೆ ವಾರ್ಷಿಕ ತಲಾ ₹10 ಸಾವಿರ ಕೋಟಿ ನಷ್ಟವಾಗಲಿದೆ ಎಂದು ತಮಿಳುನಾಡು ಹಾಗೂ ಕೇರಳ ಸರ್ಕಾರಗಳು ದೂರಿದ್ದವು. ಬಿಜೆಪಿಯೇತರ ಸರ್ಕಾರಗಳ ಸಚಿವರು ನವದೆಹಲಿಯಲ್ಲಿ ಸಭೆ ನಡೆಸಿ ನಷ್ಟ ಪರಿಹಾರ ನೀಡುವಂತೆ ಒತ್ತಡ ಹೇರಿದ್ದವು. ರಾಜ್ಯ ಸರ್ಕಾರಗಳ ಬೇಡಿಕೆಯನ್ನು ಹಣಕಾಸು ಸಚಿವಾಲಯ ಸಾರಾಸಗಟಾಗಿ ತಳ್ಳಿ ಹಾಕಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries