HEALTH TIPS

ರಾಹುಲ್‌ಗೆ NGOಗಳಿಂದ ಬೋಧನೆ, ಹೀಗಾಗಿ ಕಲಾಪಕ್ಕೆ ಅಡ್ಡಿ ಮಾಡುತ್ತಿದ್ದಾರೆ: ರಿಜಿಜು

ತವಾಂಗ್: ಸಂಸತ್ ಕಲಾಪಗಳು ಸುಗಮವಾಗಿ ನಡೆಯುವುದು ರಾಹುಲ್ ಗಾಂಧಿಯವರಿಗೆ ಬೇಡ, ಅವರಿಗೆ ಹಾಗೂ ಅವರ ಪಕ್ಷಕ್ಕೆ ಒಳ್ಳೆಯ ದಿನಗಳು ಬರಲಿವೆ ಎಂದು ಕೆಲವೊಂದು ಎನ್‌ಜಿಒಗಳು ಅವರಿಗೆ ಹೇಳಿದ್ದು, ಹೀಗಾಗಿಯೇ ಅವರು ಸದನಕ್ಕೆ ಅಡ್ಡಿಪಡಿಸುತ್ತಿದ್ದಾರೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಹೇಳಿದ್ದಾರೆ.

ಸಂಸತ್ತಿನ ಕಲಾಪಗಳು ಸುಗಮವಾಗಿ ನಡೆಯಲು ನಾವು ಹಲವು ಪ್ರಯತ್ನಗಳನ್ನು ಮಾಡಿದರೂ ಅವು ವ್ಯರ್ಥವಾಗಿವೆ. ಹೀಗಾಗಿ ಸಂಸತ್ತಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಶಮನಗೊಳಿಸಲು, ಕಾಂಗ್ರೆಸ್ ಪಕ್ಷವನ್ನು ಸಮಾಧಾನಪಡಿಸಲು ಸರ್ಕಾರವು ಇನ್ನು ಮುಂದೆ ಯಾವುದೇ ಹೆಚ್ಚುವರಿ ಕ್ರಮಗಳನ್ನು ತೆಗೆದುಕೊಳ್ಳುವುದಿಲ್ಲ ಎಂದು ರಿಜಿಜು ತಿಳಿಸಿದ್ದಾರೆ.

'ರಾಹುಲ್ ಗಾಂಧಿಯವರಿಗೆ ಸದನವನ್ನು ನಡೆಯುವುದನ್ನು ಬೇಕಿಲ್ಲ. ಅವರಿಗೆ ಸಮಸ್ಯೆಗಳನ್ನು ಸೃಷ್ಟಿಸುವುದರಲ್ಲೇ ಆಸಕ್ತಿ. 'ನಿಮ್ಮ ದಿನಗಳು ಬರಲಿವೆ' ಎಂದು ಕೆಲವು ಎನ್‌ಜಿಒಗಳು ರಾಹುಲ್ ಗಾಂಧಿಯವರಿಗೆ ಬೋಧನೆ ಮಾಡಿವೆಯಷ್ಟೆ, ಆದರೆ ಅವರ ದಿನಗಳು ಬರುವುದಿಲ್ಲ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಅವರ ಸದಸ್ಯರ ಸಂಖ್ಯೆ ಮತ್ತಷ್ಟು ಕುಸಿಯಲಿದೆ'ಎಂದು ಅವರು ಇಲ್ಲಿ ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

'ಎಲ್ಲಾ ವಿರೋಧ ಪಕ್ಷಗಳು ಕಾಂಗ್ರೆಸ್ ಜೊತೆಗಿಲ್ಲ. ಸಣ್ಣ ಪಕ್ಷಗಳ ಸದಸ್ಯರಿಗೆ ತಮಗೆ ನಿಗದಿಯಾದ ಸಮಯವನ್ನು ಸರಿಯಾಗಿ ಬಳಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಸಣ್ಣ ಪಕ್ಷಗಳು ರಾಹುಲ್ ಗಾಂಧಿ ಬಗ್ಗೆ ಅಸಮಾಧಾನ ಹೊಂದಿವೆ. ಅವರಲ್ಲಿ ಕೆಲವರು ಸ್ಪೀಕರ್ ವಿರುದ್ಧದ ನಿರ್ಣಯಕ್ಕೆ ಸಹಿಯನ್ನೂ ಹಾಕಿಲ್ಲ' ಎಂದು ಹೇಳಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries