HEALTH TIPS

ಮುಂದಿನ ಹಂತದ S I R ಗೆ ಸಿದ್ಧವಾಗಿರಿ: 18 ರಾಜ್ಯಗಳು, 4 ಕೇಂದ್ರಾಡಳಿತ ಪ್ರದೇಶಗಳಿಗೆ ಚುನಾವಣಾ ಆಯೋಗ ಸೂಚನೆ

ನವದೆಹಲಿ: ಏಪ್ರಿಲ್ ತಿಂಗಳಲ್ಲಿ ನಡೆಯುವ ಸಾಧ್ಯತೆ ಇರುವ ಮುಂದಿನ ಹಂತದ ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆಗೆ ಸಂಬಂಧಿಸಿದಂತೆ ಪೂರ್ವಸಿದ್ಧತೆಗಳನ್ನು ಮುಕ್ತಾಯಗೊಳಿಸಲು 18 ರಾಜ್ಯಗಳು ಹಾಗೂ ನಾಲ್ಕು ಕೇಂದ್ರಾಡಳಿತ ಪ್ರದೇಶಗಳಿಗೆ ಗುರುವಾರ ಭಾರತೀಯ ಚುನಾವಣಾ ಆಯೋಗ ಸೂಚನೆ ನೀಡಿದೆ.

ಈ ಹಂತದ ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ ಅಭಿಯಾನ ಮುಕ್ತಾಯಗೊಳ್ಳುತ್ತಿದ್ದಂತೆಯೇ ದೇಶದ ಎಲ್ಲಾ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಈ ಅಭಿಯಾನ ಅಂತಿಮಗೊಳ್ಳಲಿದೆ.

ಕಳೆದ ವರ್ಷದ ಜೂನ್ ತಿಂಗಳಲ್ಲಿ ದೇಶಾದ್ಯಂತ ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ ನಡೆಸಲು ಆದೇಶಿಸಲಾಗಿತ್ತು ಎಂದು ಆಂಧ್ರಪ್ರದೇಶ, ಅರುಣಾಚಲ ಪ್ರದೇಶ, ಚಂಡೀಗಢ, ದಾದ್ರಾ ಮತ್ತು ನಗರ್ ಹವೇಲಿ, ದಾಮನ್ ಮತ್ತು ದಿಯು, ಹರ್ಯಾಣ, ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಜಾರ್ಖಂಡ್, ಕರ್ನಾಟಕ, ಲಡಾಖ್, ಮಹಾರಾಷ್ಟ್ರ, ಮಣಿಪುರ, ಮೇಘಾಲಯ, ಮಿಝೋರಾಂ, ನಾಗಾಲ್ಯಾಂಡ್, ದಿಲ್ಲಿ, ಒಡಿಶಾ, ಪಂಜಾಬ್, ಸಿಕ್ಕಿಂ, ತ್ರಿಪುರ, ತೆಲಂಗಾಣ ಮತ್ತು ಉತ್ತರಾಖಂಡ ರಾಜ್ಯಗಳ ಮುಖ್ಯ ಚುನಾವಣಾಧಿಕಾರಿಗಳಿಗೆ ಬರೆದಿರುವ ಪತ್ರದಲ್ಲಿ ಚುನಾವಣಾ ಆಯೋಗ ಗಮನ ಸೆಳೆದಿದೆ.

ಬಿಹಾರದಲ್ಲಿ ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ ಅಭಿಯಾನ ಮುಕ್ತಾಯಗೊಂಡಿದ್ದು, ಒಂಬತ್ತು ರಾಜ್ಯಗಳು ಹಾಗೂ ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ಜಾರಿಯಲ್ಲಿದೆ.

ಫೆಬ್ರವರಿ 10ರಂದು ಅಸ್ಸಾಂನಲ್ಲಿ ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆಯ ಬದಲು ವಿಶೇಷ ಪರಿಷ್ಕರಣೆ ಮುಕ್ತಾಯಗೊಂಡಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries